ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಪ್ರತಿಷ್ಠಿತ ಪಿಇಎಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.
ಡಿ. ತನುಶ್ರೀ ಹಾಗೂ ವಿದ್ಯಾ ವಿ. ಅವರುಗಳು ವಿಜ್ಞಾನ ವಿಭಾಗದಲ್ಲಿ 600 ಅಂಕ ಗಳಿಸಿದ್ದರೆ ಎಚ್.ಎಸ್. ರಮ್ಯಾ ಅವರು ವಾಣಿಜ್ಯ ವಿಭಾಗದಲ್ಲಿ ಪೂರ್ಣ ಅಂಕ ಗಳಿಸುವ ಮೂಲಕ ಕಾಲೇಜಿಗೆ, ಪೋಷಕರಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















