ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಉಂಬ್ಳೆಬೈಲ್ ರಸ್ತೆಯಲ್ಲಿರುವ ಅಪ್ಪಾಜಿಗೌಡರ ನಿವಾಸಕ್ಕೆ ಇಂದು ಮುಂಜಾನೆ ಭೇಟಿ ನೀಡಿದ ಅವರು, ಮಾಜಿ ಶಾಸಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಅವರು, ಪಕ್ಷ ಹಾಗೂ ಭದ್ರಾವತಿ ಕ್ಷೇತ್ರಕ್ಕೆ ಅಪ್ಪಾಜಿ ಗೌಡರ ಕೊಡುಗೆ ಅಪಾರವಾದುದು. ಇಂತಹ ನಾಯಕನನ್ನು ಕಳೆದುಕೊಂಡ ಕ್ಷೇತ್ರ ಇಂದು ಬಡವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪ್ಪಾಜಿ ಗೌಡ ಪತ್ನಿ ಶಾರದಾ, ಪುತ್ರ ಅಜಿತ್, ಜೆಡಿಎಸ್ ಜಿಲ್ಲಾಧ್ಯಕ್ಷ ಕರುಣಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
















