ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ಹೆಚ್ಚಿನದಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ತಿಳಿಸಿದರು.
ಅವರು ಕೆ. ಶಾಮಣ್ಣರವರ 80 ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಾಮಣ್ಣರವರು ತಮ್ಮ ವೃತ್ತಿ ಬದುಕಿನಲ್ಲಿ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ವಿಇಎಸ್ ವಿದ್ಯಾಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಪ್ರಸ್ತುತ ವಿದ್ಯಾಸಂಸ್ಥೆ ಸದೃಢವಾಗಿ ಬೆಳೆಯಲು ಕಾರಣಕರ್ತರಾಗಿದ್ದಾರೆ ಎಂದರೆ ತಪ್ಪಾಗಲಾರದು. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನದ ಮಾಡುವ ಮೂಲಕ ಸಾರ್ಥಕತೆ ಕಂಡುಕೊಂಡಿದ್ದಾರೆ ಎಂದರು.
ಕೆ. ಶಾಮಣ್ಣ ಮಾತನಾಡಿ, ವಿಇಎಸ್ ವಿದ್ಯಾಸಂಸ್ಥೆ ಸ್ಥಾಪನೆಗೆ ಸಂಸ್ಥಾಪಕ ಸದಸ್ಯರುಗಳು ಕೈಗೊಂಡ ಪರಿಶ್ರಮಗಳನ್ನು ನೆನಪು ಮಾಡಿಕೊಂಡರು. ಪ್ರಸ್ತುತ ವಿದ್ಯಾಸಂಸ್ಥೆ ರಾಜ್ಯದಲ್ಲಿಯೇ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮಯ ವಿಚಾರವಾಗಿದೆ ಎಂದರು.
ವಿದ್ಯಾಸಂಸ್ಥೆ ಛೇರ‍್ಮನ್ ಬಿ.ಎಲ್ ರಂಗಸ್ವಾಮಿ, ಮಾಜಿ ಛೇರ‍್ಮನ್ ಡಾ. ಜಿ.ಎಂ ನಟರಾಜ್, ಸಂಘದ ಉಪಾಧ್ಯಕ್ಷ ನೀಲೇಶ್ ರಾಜ್, ರಾಜ್ಯ ಪರಿಷತ್ ಸದಸ್ಯ ಸಿದ್ದಬಸಪ್ಪ, ಶಿಕ್ಷಕರ ಸಂಘದ ಮುಖಂಡರಾದ ಎಸ್. ಕೂಬಾನಾಯ್ಕ, ಲೋಹಿತೇಶ್ವರಪ್ಪ, ಧನಂಜಯ, ಯು. ಮಹಾದೇವಪ್ಪ, ಎಂ.ಎಸ್ ಮಲ್ಲಿಕಾರ್ಜುನ್, ಎಂ.ಆರ್ ರೇವಣಪ್ಪ, ಬಸವಂತರಾವ್ ದಾಳೆ, ಲೋಕೇಶ್, ಶಿವಾನಂದ ಕಾಂಬಳೆ, ವೇಣುಗೋಪಾಲ್, ರಮೆಶ್, ಚಂದ್ರಶೇಖರಪ್ಪ ಚಕ್ರಸಾಲಿ, ಜಗದೀಶ್, ಇಂಡಿ ಮಂಜುನಾಥ್, ರಾಜಾನಾಯ್ಕ್ ದೇವರಾಜ್ ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post