ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆಯ ಬಳಿಯಲ್ಲೇ ಜನನಿಬಿಡ ಪ್ರದೇಶವಾದ ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಅಪಹರಿಸಿರುವ ಘಟನೆ ನಡೆದಿದೆ.
ಸೆ.5ರಂದು ಶಿಕ್ಷಕಿಯೊಬ್ಬರ ಹಾಗೂ ವೆಂಕಟೇಶ ನಗರದಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಅಪಹರಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ನಗರವನ್ನು ಬೆಚ್ಚಿ ಬೀಳಿಸಿದೆ.
ಕೋಟೆ ಪೊಲೀಸ್ ಠಾಣೆಯಿಂದ ಕೂಗಳತೆ ದೂರದ ಪ್ರದೇಶದಲ್ಲಿ ಜನರ ಓಡಾಟ ಇರುವಂತೆಯೇ ಈ ಘಟನೆ ನಡೆದಿರುವುದು ನಗರವಾಸಿಗಳಲ್ಲಿ ಆತಂಕವನ್ನು ಸೃಷ್ಠಿಸಿದೆ.
ಮಾಂಗಲ್ಯ ಕಳೆದುಕೊಂಡ ಬಗ್ಗೆ ಮಹಿಳೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post