ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಸಬಾ-2 ಹೋಬಳಿ ಸಿದ್ದಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ದೂರು ದಾಖಲಿಸಿದ್ದು, ತಹಶೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ಕುರಿತಂತೆ ಹಳೇನಗರ ಪೊಲೀಸ್ ಠಾಣೆಯ ಬಳಿಯಲ್ಲಿ ಮಹಿಳೆ ಸಂಬಂಧಿ ಹಾಗೂ ಸ್ನೇಹಿತರು ಜಮಾಯಿಸಿ, ತಹಶೀಲ್ದಾರ್ ವಿರುದ್ಧ ಎಫ್’ಐಆರ್ ದಾಖಲಿಸಿ, ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ವಾರ ಭವಿಷ್ಯ ನಿಖರ, ವೈಜ್ಞಾನಿಕ ಜ್ಯೋತಿಷಿ ಶ್ರೀ ನಾರಾಯಣ ಭಟ್ ಅವರಿಂದ: 13.09.2020 ರಿಂದ 19.09.2020
ಹಿನ್ನೆಲೆಯೇನು? ದೂರಿನಲ್ಲೇನಿದೆ?
ಸದರಿ ಗ್ರಾಮ ಲೆಕ್ಕಾಧಿಕಾರಿಗಳ ಬಳಿಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪರಮೇಶ್ವರಪ್ಪ ಎನ್ನುವವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಪುತ್ರಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಈಕೆಗೆ ವೇತನ ಪಾವತಿ ಮಾಡಿಕೊಟ್ಟಿಲ್ಲವೆಂದು ತಹಶೀಲ್ದಾರ್ ಅವರ ಬಳಿ ಕೇಳಲು ತೆರಳಿದ ವೇಳೆ ನೀನು ಒಬ್ಬಳೇ ನನ್ನ ಕ್ವಾಟ್ರಸ್’ಗೆ ಬರಬೇಕು, ನೀನು ನನಗೆ ಸಂತೋಷ ಪಡಿಸಿದರೆ ನಿನ್ನ ಕೆಲಸ ಮಾಡಿಕೊಡುತ್ತೇನೆ ಎಂದು ತಮಗೆ ಕಿರುಕುಳ ನೀಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post