ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊಸನಗರ: ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಎಂದು ಎಂಎಸ್’ಐಎಲ್ ಅಧ್ಯಕ್ಷ, ಸಾಗರ ಶಾಸಕ ಎಚ್. ಹಾಲಪ್ಪ ಹೇಳಿದರು.
ಹೊಸನಗರ ಹೋಲಿ ರೇಡಿಮರ್ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಬರಲಾಗುತ್ತಿಲ್ಲ. ಹೀಗಾಗಿ, ಆನ್’ಲೈನ್ ಶಿಕ್ಷಣದ ಅನಿವಾರ್ಯತೆಯಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಕಾರಣಕ್ಕೂ ಹಿಂಜರಿಯದೇ ಮಕ್ಕಳಿಗೆ ಕಲಿಸಬೇಕು. ಮಕ್ಕಳೂ ಸಹ ಗಮನವಿಟ್ಟು ಕಲಿತು ಇರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ತಾ.ಪಂ ಅಧ್ಯಕ್ಷರು, ಸದಸ್ಯರು, ಜಿಪಂ ಸದಸ್ಯರು, ಪ್ರೊಬೆಷನರಿ ಐಎಎಸ್ ಅಧಿಕಾರಿಯವರು, ತಹಶೀಲ್ದಾರ್ ಪಪಂ ಸದಸ್ಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಹೊಳೆಕೊಪ್ಪದ ಶ್ರೀಧನಾಂಜನೇಯ ಸ್ವಾಮಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ಡಾ.ರಾಮಪ್ಪ ನವರು ಉಪಸ್ಥಿತರಿದ್ದರು.
ಸಾಗರದ ರೋಟರಿ ಸ್ಕೂಲ್’ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹೆಗ್ಗೋಡಿನ ಧರಣಿ ಸ್ಥಳಕ್ಕೆ ಶಾಸಕರ ಭೇಟಿ
ಲಾಕ್ ಡೌನ್’ನಿಂದ ಬೇಡಿಕೆ ಕುಸಿದು ಹೆಗ್ಗೋಡಿನ ಚರಕ (ಕೈಮಗ್ಗ) ಉದ್ಯಮ ಮುಚ್ಚುವ ಸ್ಥಿತಿ ತಲುಪಿದೆ, ನೇಯಿಗೆ ಸ್ಥಗಿತಗೊಂಡಿರುವುದರಿಂದ ಕಾರ್ಮಿಕರು ಉದ್ಯೋಗವಿಲ್ಲದೆ, ಧರಣಿ ನೆಡೆಸುತ್ತಿದ್ದ ಸ್ಥಳಕ್ಕೆ ಹಾಲಪ್ಪ ನವರು ಭೇಟಿ ನೀಡಿ ಪ್ರತಿಭಟನೆ ನಿರತರ ಅಹವಾಲುಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿಗಳೊಂದಿಗೆ ಹಾಗೂ ಮುಂಬರುವ ಅಧಿವೇಶನದಲ್ಲಿ ಸಮಸ್ಯೆ ಬಗ್ಗೆ ಚರ್ಚಿಸುವ ಭರವಸೆ ನೀಡಿ, ಚರಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಟಿ.ಡಿ. ಮೇಘರಾಜ್, ಬಿ.ಟಿ. ರವಿಂದ್ರ, ಗಿರೀಶ್ ಗುಳ್ಳಳ್ಳಿ, ಶಿವಾನಂದ ಶೆಟ್ಟಿ, ಸುಮ ಗಡಿಕಟ್ಟೆ, ಎಂ.ಎಸ್. ನಾಗರಾಜ್, ಹಾಗೂ ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.
ಸಾಗರದ ಮತದಾರರ ಪರವಾಗಿ ಕೃತಜ್ಞತೆ
ವಿಶ್ವವಿಖ್ಯಾತ ಜೋಗದ ಅಭಿವೃದ್ಧಿಗಾಗಿ ಹಲವು ಬಾರಿ ಮುಖ್ಯಮಂತ್ರಿಗಳ ಜೊತೆ ಚರ್ಚಿ ಮನವಿ ಮಾಡಲಾಗಿತ್ತು. ನಿನ್ನೆ ನೆಡೆದ ಸಚಿವ ಸಂಪುಟ ಸಭೆಯಲ್ಲಿ 120 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿದ್ದಾರೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅಭಿವೃದ್ಧಿ ಪರ್ವದ ಯೋಜನೆಗೆ ಅನುದಾನ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಪ್ರವಾಸೋದ್ಯಮ ಸಚಿವರಾದ ಸಿ.ಟಿ. ರವಿ, ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಸಂಪುಟದ ಸಚಿವರುಗಳಿಗೆ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಟಿ.ಡಿ. ಮೇಘರಾಜ್, ಚೇತನ್ ರಾಜ್ ಕಣ್ಣೂರು, ಗಣೇಶ್ ಪ್ರಸಾದ್, ಲೋಕನಾಥ್ ಬಿಳಿಸಿರಿ, ಬಿ.ಟಿ. ರವೀಂದ್ರ, ಸಂತೋಷ್ ಶೇಟ್, ಸತೀಶ್ ಮೋಗವೀರ, ಗೌತಮ್ ವಕೀಲರು, ಸಂತೋಷ್ ಕೆ.ಜಿ ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093







Discussion about this post