ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಡ್ರಗ್ಸ್ ದಂಧೆ ವಿಚಾರದಲ್ಲಿ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ ಯುವಮೋರ್ಚಾ ಮನವಿ ಮಾಡಿದೆ.
ಈ ಕುರಿತಂತೆ ಯುವಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪಕ್ಷ ಮಾಸ: ಪಿತೃ ಶ್ರಾದ್ಧಾ ಮಾಡಲು ಶಕ್ತಿಯಿಲ್ಲದವರು ಏನು ಮಾಡಬಹುದು? ಅಮಾವಾಸ್ಯೆಯಂದು ಪಿಂಡದಾನದ ವೈಜ್ಞಾನಿಕ ಹಿನ್ನೆಲೆಯೇನು?
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ಜನರ ನೆಮ್ಮದಿ ಕೆಡಿಸಿದೆ. ಪ್ರಸ್ತುತ ಈ ವಿಚಾರ ಕುರಿತಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಮಾಜಕ್ಕೆ ಮಾರಕವಾಗಿರುವ ಈ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರೂ ಸರಿಯಾದ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದಾರೆ.
ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹರಿಕೃಷ್ಣ, ಸತೀಶ್, ಶರತ್, ಮೇಘರಾಜ್, ಧೃವ, ದಿನೇಶ್ ಸೇರಿದಂತೆ ಹಲವರು ಇದ್ದರು.
Get In Touch With Us info@kalpa.news Whatsapp: 9481252093
Discussion about this post