ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ನೂತನ ವಕ್ತಾರರನ್ನಾಗಿ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಂದಿನ ದಿನಗಳಲ್ಲಿ ಪಕ್ಷದ ವಕ್ತಾರರಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ.
ತಮಗಿರುವ ಅನುಭವ ಹಾಗೂ ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮಥ್ಯವನ್ನು ಗಮನಿಸಿ ಕೆಪಿಸಿಸಿ ವಕ್ತಾರರನ್ನಾಗಿ ನಿಯೋಜಿಸಲಾಗಿದೆ. ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನಗಳ ಮೇಲೆ ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಲಾಗಿದೆ.
2013 ವಿಧಾನಸಭಾ ಚುನಾವಣೆಯಲ್ಲಿ ವಿಜಯಶಾಲಿಯಾಗಿದ್ದ ಪ್ರಸನ್ನ ಕುಮಾರ್, ಅದಕ್ಕೂ ಮುನ್ನ ಮಹಾನಗರ ಪಾಲಿಕೆ ಸದಸ್ಯರಾಗಿಯೂ ಸಹ ಅನುಭವ ಹೊಂದಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post