ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆ.ಬಿ. ಪವಿತ್ರಾ ರಾಮಯ್ಯ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಮಲವಗೊಪ್ಪದಲ್ಲಿರುವ ಕಾಡಾ ಕಚೇರಿಯಲ್ಲಿ ಇಂದು ಮುಂಜಾನೆ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಾನು ದಶಕಗಳ ಕಾಲ ರೈತರ ಪರ ಇದೇ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇನೆ. ಈಗ ಇದೇ ಕಚೇರಿಯಲ್ಲಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಇಂದು ನನಗೆ ದೊರೆತಿರುವ ಈ ಸ್ಥಾನ ಅಂದಿನ ಹೋರಾಟದ ಫಲವಾಗಿದ್ದು, ನನಗೆ ಜವಾಬ್ದಾರಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಸ್. ದತ್ತಾತ್ರಿ, ಬಳ್ಳೆಕೆರೆ ಸಂತೋಷ್, ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್, ರೈತ ಮುಖಂಡ ಎಚ್.ಆರ್. ಬಸವರಾಜಪ್ಪ ಹಾಜರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
Get In Touch With Us info@kalpa.news Whatsapp: 9481252093















