ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಧುರೀಣ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ (89) ಇಂದು ಮಲ್ಲಾಪುರ ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಇಬ್ಬರು ಪತ್ನಿಯರು, ಹತ್ತು ಪುತ್ರಿಯರು, ಪುತ್ರ ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಸಿ. ಪಾಟೀಲ್ ಸೇರಿದಂತೆ ಅಪಾರ-ಬಂಧು ಮಿತ್ರರನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಚನ್ನವೀರಪ್ಪ ಅವರು ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚನ್ನವೀರಪ್ಪ ಗೌಡ ಪಾಟೀಲ ಅವರ ನಿಧನಕ್ಕೆ ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಎಚ್.ಕೆ. ಪಾಟೀಲ್, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಮಧು ಬಂಗಾರಪ್ಪ, ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ಕಾನೂನು ಘಟಕ ಮತ್ತು ಮಾನವ ಹಕ್ಕುಗಳ ವಿಭಾಗದ ಜಿಲ್ಲಾಧ್ಯಕ್ಷ ಚಿಮಣೂರು ಲಕ್ಷ್ಮಿಕಾಂತ್, ಜೆಡಿಎಸ್ ಬ್ಲಾಕ್ ಅಧ್ಯಕ್ಷರಾದ ಎಚ್. ಗಣಪತಿ, ಕೆ.ಪಿ. ರುದ್ರಗೌಡ, ಸೊರಬ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಡಿ. ಅಣ್ಣಪ್ಪ ಹಾಲಘಟ್ಟ, ಕಾರ್ಯದರ್ಶಿ ಹಬೀಬುಲ್ಲಾ ಹವಾಲ್ದಾರ್, ಜಿ. ಕೆರಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಕರುಣಾಕರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಯವರು ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
(ವರದಿ: ಮಧುರಾಮ್, ಸೊರಬ)
Get In Touch With Us info@kalpa.news Whatsapp: 9481252093
Discussion about this post