ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಕೋಳಿ ಮಂಜನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ದ್ವಿಚಕ್ರ ವಾಹನವು ಕಳ್ಳತನವಾದ ಬಗ್ಗೆ ನೀಡಲಾಗಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ತಲೆ ತಪ್ಪಿಸಿಕೊಂಡಿದ್ದ ಆರೋಪಿ ಕೋಳಿ ಮಂಜನನ್ನು ಪೊಲೀಸರು ಬಂಧಿಸಿದ್ದಾರೆ.
ಡಿವೈಎಸ್’ಪಿ ಸುಧಾಕರ್ ನಾಯಕ್ ಮಾರ್ಗದರ್ಶನದಲ್ಲಿ ಭದ್ರಾವತಿ ನಗರ ವೃತ್ತ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಹಳೇನಗರ ಪಿಎಸ್’ಐ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಿ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.
ಬಂಧಿತ ಆರೋಪಿಯಿಂದ ಅನ್ವರ್ ಕಾಲೋನಿಯಲ್ಲಿ ಕಳ್ಳತನ ಮಾಡಿದ ಒಂದು ದ್ವಿ ಚಕ್ರ ವಾಹನ ಹಾಗೂ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಒಂದು ದ್ವಿ ಚಕ್ರ ವಾಹನ ಸೇರಿ ಒಟ್ಟು ರೂ. 27,000 ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Get In Touch With Us info@kalpa.news Whatsapp: 9481252093
Discussion about this post