ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಕಾರ್ಯವೈಖರಿ, ಅದು ನಡೆಸುವ ಕಾರ್ಯಕ್ರಮಗಳು ಹಾಗೂ ಜನಸ್ಪಂದನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಎಷ್ಟರ ಮಟ್ಟಿಗೆ ಫಲಪ್ರದವಾಗಿದೆ ಎಂಬ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಪ್ರಥಮ ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್’ಬುಕ್ ಮುಖಾಂತರ ಎಲ್ಲಾ ಜಿಲ್ಲಾ ಪಂಚಾಯಿತಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳ ವಿವರ, ಮಾಹಿತಿ, ಕಾಮಗಾರಿಗಳ ಸಮಗ್ರ ಮಾಹಿತಿಯನ್ನು ನೀಡುತ್ತಲೇ ಇದ್ದವು. ಅದು ಎಷ್ಟರ ಮಟ್ಟಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಫಲಪ್ರದವಾಗಿದೆ ಎಂಬುದನ್ನು ಗಮನಿಸುವಂತಹ ಸ್ಪರ್ಧೆ ಇದಾಗಿತ್ತು.
ಕಳೆದ ಅವಧಿಯಲ್ಲಿನ ಕಾಮಗಾರಿಗಳ ಸಮಗ್ರ ವಿವರಗಳನ್ನು ಅದಕ್ಕೆ ಸಂದ ಲೈಕ್’ಗಳ ಕುರಿತ ವಿಚಾರ ವಿನಿಮಯಗಳನ್ನು ಪರಾಮರ್ಶಿಸುವ ಕಾರ್ಯವಾಗಿತ್ತು.
ಆರಂಭದಿಂದಲೂ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ತನ್ನ ಕಾರ್ಯಚಟುವಟಿಕೆಗಳನ್ನು ಸಮಾಜಮುಖಿಯಾಗಿ ಬಿಂಬಿಸುತ್ತಿತ್ತು. ಅತಿ ಹೆಚ್ಚು ವೀಕ್ಷಕರನ್ನು ಹೊಂದಿತ್ತು. ಸ್ಪರ್ಧೆಯ ಕೊನೆಯ ಅವಧಿಯಲ್ಲಿ ಮಂಡ್ಯ ಜಿಲ್ಲೆ ಶಿವಮೊಗ್ಗ ಜಿಲ್ಲೆಗೆ ನೇರಸ್ಪರ್ಧೆ ನೀಡಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಹಾಗೂ ಅದರ ಕುರಿತು ಸಲಹೆ ನೀಡುವಂತೆ ಹಲವರು ಮನವಿ ಮಾಡಿದ್ದು ಸರಿಯಷ್ಟೇ.
ಅಂತಿಮವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಕ್ಟೋಬರ್ 2ರಂದು ಪ್ರಶಸ್ತಿ ಸ್ವೀಕರಿಸಲು ಸಿದ್ಧವಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ಎರಡನೇ ಸ್ಥಾನವನ್ನು ಪಡೆದಿದೆ.
ಶಿವಮೊಗ್ಗ ಜಿಪಂ ನ ಕಾರ್ಯಕ್ರಮಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಬಹುಮಾನ ಪಡೆಯಲು ಕಾರಣಕರ್ತರಾದ
ಜಿಲ್ಲೆಯ ವೀಕ್ಷಕರನ್ನು ಜಿಲ್ಲಾ ಪಂಚಾಯಿತಿ ಪರವಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಅವರು ಅಭಿನಂದಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post