ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಪ್ರಕಟಗೊಂಡಿದ್ದು, ಈ ಮೂಲಕ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆಬಿದ್ದಿದೆ.
ಈ ಕುರಿತಂತೆ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದ್ದು, ಎಲ್ಲ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30/45ರವರೆಗೂ ನಡೆಯಲಿದೆ ಎಂದು ಮಂಡಳಿ ಹೇಳಿದೆ.
ಹೀಗಿದೆ ವೇಳಾಪಟ್ಟಿ:
- ಜೂನ್ 25(ಗುರುವಾರ): ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ-10.30ರಿಂದ ಮಧ್ಯಾಹ್ನ 1.30
- ಜೂನ್ 26(ಶುಕ್ರವಾರ) ಕೋರ್ ಸಬ್ಜೆಕ್ಟ್- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45
- ಜೂನ್ 27(ಶನಿವಾರ) – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
- ಜೂನ್ 29- ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
- ಜುಲೈ- 1 ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
- ಜುಲೈ 2 – ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
- ಜುಲೈ- 3 ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
- ಜುಲೈ 4- ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ
Get in Touch With Us info@kalpa.news Whatsapp: 9481252093
Discussion about this post