ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನವನ್ನು ಗಳಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಿಸಿದರು.
ಈ ವರ್ಷ ಒಟ್ಟು ಶೇ.71.80ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದ್ದು, ಕಳೆದ ವರ್ಷದ 73.70ರಷ್ಟು ದಾಖಲಾಗಿತ್ತು.
5,82,316 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದು, ಸರ್ಕಾರಿ ಶಾಲೆಗಳ ಫಲಿತಾಂಶ ಶೇ.72.79 ರಷ್ಟಾಗಿದ್ದು, ಅನುದಾನಿತ ಶಾಲೆಗಳು ಶೇ.70.60 ರಷ್ಟು, ಖಾಸಗಿ ಶಾಲೆಗಳ ಶೇ.82.3ರಷ್ಟು ಫಲಿತಾಂಶ ದಾಖಲಾಗಿದೆ. ಶೇ.66.41ರಷ್ಟು ಬಾಲಕರು, ಶೇ.77.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.
2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. 625ಕ್ಕೆ 625 ಅಂಗಳನ್ನು ಆರು ವಿದ್ಯಾರ್ಥಿಗಳು ಅಂಕ ಗಳಿಸಿದ್ದು, 625ಕ್ಕೆ 624 ಅಂಕ ಗಳಿಸಿರುವ ವಿದ್ಯಾರ್ಥಿಗಳ ಸಂಖ್ಯೆ 11 ಆಗಿದೆ.
ಜಿಲ್ಲಾವಾರು ಫಲಿತಾಂಶದಲ್ಲಿ ಈ ಬಾರಿ ರ್ಯಾಂಕ್ ಕೊಡುವ ಬದಲು ಗ್ರೇಡ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ, ಮಂಡ್ಯ, ಚಿತ್ರದುರ್ಗ, ಕೋಲಾರ್, ಉಡುಪಿ, ರಾಮನಗರ, ಹಾಸನ, ಉತ್ತರ ಕನ್ನಡಗಳು ಎ ಗ್ರೇಡ್ ಪಡೆದಿವೆ.
ಕೊರೋನಾ ಆತಂಕದ ನಡುವೆಯೇ ಪರೀಕ್ಷಾ ಕೇಂದ್ರಗಳಿಗೆ ಧೈರ್ಯದಿಂದ ಆಗಮಿಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನು ಪ್ರಶಂಸಿಸಿದ ಸಚಿವರು ಈ ಮಕ್ಕಳೆಲ್ಲಾ ಕೊರೋನಾ ವಾರಿಯರ್ಸ್‌ಗಳು ಎಂದು ಶ್ಲಾಘಿಸಿದರು.
ಈ ಬಾರಿಯ ಪರೀಕ್ಷೆ ವಿಶೇಷವಾಗಿತ್ತು. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವುದೋ ಇಲ್ಲವೋ ಎಂಬ ಗೊಂದಲವಿತ್ತು. ಸರ್ಕಾರ ಚಂದನ ಚಾನಲ್ ಮೂಲಕ ಎಷ್ಟೇ ರಿವಿಷನ್ ಮಾಡಿದರೂ, ತರಗತಿಯಲ್ಲಿ ಶಿಕ್ಷಕರು ಮಾಡಿದಷ್ಟು ಪರಿಣಾಮಕಾರಿಯಾಗುವುದಿಲ್ಲ. ಈ ಎಲ್ಲ ಸಮಸ್ಯೆಗಳ ನಡುವೆಯೂ ಪರೀಕ್ಷೆ ಬರೆದ ಮಕ್ಕಳು ಬಗ್ಗೆ ಸಚಿವರು ಮುಕ್ತಕಂಠದಿಂದ ಪ್ರಶಂಸೆ ವ್ಯಕ್ತಪಡಿಸಿದರು.
ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಎಸ್ಎಂಎಸ್ ಮೂಲಕ ರವಾನಿಸಲಾಗುತ್ತದೆ.
ಕಳೆದ ಜೂನ್. 25 ರಿಂದ ಜುಲೈ. 3ರವರೆಗೆ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಅದಾದ ಬಳಿಕ ಮೌಲ್ಯಮಾಪನ ಆರಂಭಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
ಈ ಬಾರಿ 7,43,477 ಸಾಮಾನ್ಯ ವಿದ್ಯಾರ್ಥಿಗಳು ಹಾಗೂ 20,857 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಂಟೈನ್ಮೆಂಟ್ ಪ್ರದೇಶಗಳ 3911 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದರು. ಕೋವಿಡ್-19 ಹೊರತುಪಡಿಸಿ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಈ ವೆಬ್ ಸೈಟ್ ಗಳಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಲಭ್ಯ:
www.karresults.nic.in
www.kseeb.kar.nic.in
updating…;
Get In Touch With Us info@kalpa.news Whatsapp: 9481252093
Discussion about this post