ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಮ್ಮು ಕಾಶ್ಮೀರದ #JammuKashmir ರಜೌರಿಯಲ್ಲಿ ಉಗ್ರರೊಂದಿಗೆ ವೀರಾವೇಶದಿಂದ ಸೆಣಸಾಗಿ ದೇಶಕ್ಕಾಗಿ ಪ್ರಾಣವನ್ನೇ ಬಲಿ ಕೊಟ್ಟ ವೀರ ಯೋಧ ಕ್ಯಾ.ಪ್ರಾಂಜಲ್(29) #CaptMVPranjal ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದ್ದು, ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ #HALAirport ಸೇನಾ ವಿಮಾನದಲ್ಲಿ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ತರಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಾಂಜಲ್ ಅವರ ಪತ್ನಿ, ತಂದೆ-ತಾಯಿ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು.

ಗಣ್ಯರ ಅಂತಿಮ ನಮನ
ಎಚ್’ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಾಂಜಲ್ ಅವರ ಪಾರ್ಥಿವ ಶರೀರಕ್ಕೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
With a heavy heart, received mortal remains of Capt. Pranjal MV, who made the supreme sacrifice while defending the nation at Rajouri, J&K, during an encounter with terrorists.
While the nation mourns the loss of her young officer and pays obeisances to his ultimate sacrifice,… pic.twitter.com/xm1K4c5HU1
— Tejasvi Surya (@Tejasvi_Surya) November 24, 2023
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, #Siddharamaiah ಉಗ್ರರ ವಿರುದ್ಧ ಕಾಳಗದಲ್ಲಿ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ದೇಶ ರಕ್ಷಣೆಗೆ ಹೋರಾಡಿ ಕ್ಯಾಪ್ಟನ್ ಪ್ರಾಂಜಲ್ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಕುಟುಂಬದ ಒಬ್ಬನೇ ಮಗನನ್ನು ಪೋಷಕರು ಕಳೆದುಕೊಂಡಿದ್ದಾರೆ. ದುಃಖ ಭರಿಸುವ ಶಕ್ತಿ ದೇವರು ಅವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.
ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಇನ್ನು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿರುವ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದೆ.

ಅಗಲಿದ ವೀರ ಯೋಧನ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ.
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಸೇನಾಪಡೆ ಹಾಗೂ ಭಯೋತ್ಪಾದಕರ ನಡುವಿನ ಗುಂಡಿನ ಕಾಳಗದಲ್ಲಿ ವೀರ ಮರಣವನ್ನಪ್ಪಿದ ಹೆಮ್ಮೆಯ ಕನ್ನಡಿಗ ಭಾರತ ಮಾತೆಯ ಸುಪುತ್ರ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಾಯಿತು.
ಸಂತೃಪ್ತ ಜೀವನ ನಡೆಸಲು ಹಾಗೂ ಇತರ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳನ್ನು ಹೊಂದುವ ವಿಫುಲ… pic.twitter.com/Z9T95UVJrp— Vijayendra Yediyurappa (@BYVijayendra) November 24, 2023
ಜಿಗಣಿಯ ನಂದನವನ ಲೇಔಟ್’ನಲ್ಲಿರುವ ಪ್ರಾಂಜಲ್ ಅವರ ನಿವಾಸದಲ್ಲಿ ಬೆಳಗ್ಗೆ 7 ಗಂಟೆಯಿಂದ 10.30ರವರೆಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.
ಜಿಗಣಿಯ ನಿವಾಸದಿಂದ ಕೂಡ್ಲು ಗೇಟ್’ವರೆಗೂ ಸುಮಾರು 30 ಕಿಲೋ ಮೀಟರ್ ದೂರ ಅಂತಿಮ ಯಾತ್ರೆ ನಡೆಸಲಾಗುತ್ತದೆ. ಆನಂತರ ಸಕಲ ಸೇನೆ ಹಾಗೂ ಸರ್ಕಾರಿ ಗೌರವದೊಂದಿಗೆ ಬ್ರಾಹ್ಮಣ #Brahmin ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post