No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2021
in ರಾಷ್ಟ್ರೀಯ
0
ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.

ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ.
ಬುಧವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ
ಮಾರಾಟ ಮಾಡುತ್ತಿದಿಯೋ ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನ್ನದೇಯಾದ ಸಂಸ್ಥೆಯ ಮೂಲಕ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಟ ಶೇ.25 ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು ಎಂದು ಹೇಳಿದರು.
ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗ್ ಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.
ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇಂತಹುದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದು ಹೇಳಿದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50 ರೂ. ಖರ್ಚಾಗಬಹುದು ಎಂದರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಕೆಎಸ್‍ಎಂಸಿಎಲ್, ಎಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆಯ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.
ಗಣಿಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನ ವರದಿ(ಡಿಪಿಆರ್) ಸಿದ್ದಪಡಿಸಲು ಸಚಿವ ನಿರಾಣಿ ಅವರು ಸೂಚಿಸಿದರು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಸೇರಿದಂತೆ ಮತ್ತಿತರ ಜೊತೆ ಪ್ರತ್ಯೇಕವಾಗಿ ವಿಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ದಪಡಿಸಲು ನಿದೇರ್ಶನ ನೀಡಿದರು. ಈ ಮೂರು ಜಿಲ್ಲೆಗಳಲ್ಲಿ ಡಿಎಂಎಪ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ.

ಡಿಎಂಎಪ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಲಾಗುವುದು. ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ, ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ದಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಅದಷ್ಟು ಶೀಘ್ರ ಇಲಾಖೆಗೆ ವಿಸ್ತೃತ ಯೋಜನ ವರದಿಯನ್ನು ಸಿದ್ದಪಡಿಸುವುದಾಗಿ ಭರವಸೆ ಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDepartment of Mines and GeologyKannada News WebsiteLatest News KannadaSandಗಣಿ ಮತ್ತು ಭೂವಿಜ್ಞಾನ ಇಲಾಖೆಬೆಂಗಳೂರುಮರಳು
Share222Tweet123Send
Previous Post

ಶಿವಮೊಗ್ಗ: ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

Next Post

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು...!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

February 27, 2026
ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

February 27, 2026
ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

February 27, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL