ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನ.ಉ.ವಿ.-01 ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ದಿನಾಂಕಗಳಂದು ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಆಗಸ್ಟ್ 25 ರಂದು ಡಾಲರ್ಸ್ ಕಾಲೋನಿ, ಅಶ್ವತ್ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ
ಆಗಸ್ಟ್ 26 ರಂದು ಪವನಶ್ರೀ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ
ಆಗಸ್ಟ್ 27 ರಂದು ಕೃಷಿನಗರ 1 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ನ.ಉ.ವಿ.1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post