ಕಲ್ಪ ಮೀಡಿಯಾ ಹೌಸ್ | ಕಾರವಾರ |
ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಅನ್ನದ ಅಗುಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಅಮಿತ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆಯನ್ನು ಸಹ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಆತನಿಗೆ ನೀರು ಕುಡಿಸಿದ್ದಾರೆ. ಆದರೆ ಆತ ಅಲ್ಲೆ ಕುಸಿದು ಬಿದ್ದಿದ್ದು, ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಿನಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆ ಎಂದು ದೃಢಪಡಿಸಿದ್ದಾರೆ.
ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















