ಕಲ್ಪ ಮೀಡಿಯಾ ಹೌಸ್ | ಕಾರವಾರ |
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಜನ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಜೀ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಕೈಯನ್ನು ನಾವೆಲ್ಲರೂ ಸೇರಿ ಬಲಪಡಿಸಬೇಕಿದೆ ಎಂದು ಶಾಸಕಿ ರೂಪಾಲಿ ನಾಯ್ಕ್ ಕರೆ ನೀಡಿದರು.
ಬೂತ್ ಸಮಿತಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಅಂಕೋಲಾ ಮಂಡಲದಿಂದ ಬೆಲೇಕೇರಿ ಸೀಬರ್ಡ್ ಕಾಲೋನಿ, ಅಜ್ಜಿಕಟ್ಟಾ, ಕೇಣಿ ಹಾಗೂ ಶೆಟಗೇರಿ ಗ್ರಾಮದ ವ್ಯಾಪ್ತಿಯ ಕಣಗಿಲ ಹಾಗೂ ಹಡವ ಬೂತ್ ಗಳಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೂತ್‌ಗಳಲ್ಲಿ ಸಮಿತಿಯ ಕಾರ್ಯವೈಖರಿ, ಬೂತ್ ತಂಡದ ಸದಸ್ಯರ ಮಾಹಿತಿ ಪಡೆದು ಪರಿಶೀಲಿಸಲಾಯಿತು. ಪಂಚರತ್ನ ಸಮಿತಿಯನ್ನೂ ಕೂಡ ಪರಿಶೀಲಿಸಿ ರಚನೆ, ಪೇಜ್ ಪ್ರಮುಖರ ನೇಮಕ, ವಾಟ್ಸ್‌ಪ ಗ್ರೂಪ್‌ಗಳ ರಚನೆ ಮಾಡಲಾಯಿತು. ಪಕ್ಷ ಸಂಘಟನೆಗೆ ನೀಡಿದ ಯೋಜನೆಯನ್ನು ಕಾರ್ಯಗಳನ್ನು ಶಕ್ತಿಮೀರಿ ಮಾಡಬೇಕು. ಯುದ್ಧೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.
ಶೈಕ್ಷಣಿಕ, ಸಾಮಾಜಿಕ ಹಾಗೂ ಅರ್ಥಿಕವಾಗಿ ಜನರ ಏಳಿಗೆಗೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಇವೆಲ್ಲವನ್ನೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಮಾಹಿತಿಯನ್ನು ಹಂಚಿಕೊಂಡು ಯೋಜನೆ ತಲುಪುವಂತೆ ಬೂತ್ ಸಮಿತಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಅಂಕೋಲಾ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು, ಉಪಸ್ಥಿತರಿದ್ದರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















