ಕಲ್ಪ ಮೀಡಿಯಾ ಹೌಸ್ | ಕಾರವಾರ |
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ #Bhatkala ನಗರವನ್ನು 24 ಗಂಟೆಯೊಳಗೆ ಸ್ಪೋಟಿಸುತ್ತೇನೆ ಎಂಬ ಬೆದರಿಕೆ ಈ ಮೇಲ್ ಭಟ್ಕಳ ಶಹರ ಠಾಣೆಗೆ ಬಂದಿದೆ ಎಂದು ವರದಿಯಾಗಿದೆ.
ಭಟ್ಕಳ ಶಹರ ಪೊಲೀಸ್ ಠಾಣೆಗೆ ಬೆದರಿಕೆ ಇ-ಮೇಲ್ ಸಂದೇಶ ಜುಲೈ 10ರ ಬೆಳಗ್ಗೆ ಎರಡು ಬಾರಿ ಬಂದಿದೆ. ಈ ಬೆದರಿಕೆ ಮೇಲ್ kannnannandik@gmail.com ಎಂಬ ಇ ಮೇಲ್’ನಿಂದ bhatkaltownkwr@ksp.gov.in ಗೆ ಬಂದಿದೆ ಎಂದು ಹೇಳಲಾಗಿದೆ.
ಜುಲೈ 10 ರ ಬೆಳಗ್ಗೆ ಬಂದ ಮೊದಲ ಇ-ಮೇಲ್ ಸಂದೇಶದಲ್ಲಿ ವಿ ವಿಲ್ ಪ್ಲಾಂಟ್ ಬಾಂಬ್ ಇನ್ ಭಟ್ಕಳ ಟೌನ್’ ಎಂದು ಸಂದೇಶ ಕಳುಹಿಸಲಾಗಿದ್ದು, ನಂತರ ಆಲ್ ದ ಬಾಂಬ್ ವಿಲ್ ಬ್ಲಾಸ್ಟ್ ಇನ್ 24 ಹಾವರ್ಸ್’ ಎಂದು ಸಂದೇಶ ಕಳುಹಿಸಲಾಗಿದೆ.
ಈ ಕುರಿತು ಭಟ್ಕಳ ಶಹರ ಠಾಣೆಯ ಪಿಎಸ್’ಐ ನವೀನ್ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇಂದು ಮುಂಜಾಗೃತ ಕ್ರಮವಾಗಿ ಭಟ್ಕಳ ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶದಲ್ಲಿ ಶ್ವಾನ ದಳ ಹಾಗೂ ಜಿ¯್ಲÁ ಬಾಂಬ್ ನಿಷ್ಕಿöçಯ ದಳದಿಂದ ತಪಾಸಣೆ ನಡೆಸಲಾಯಿತು.
ಇದಲ್ಲದೇ, ಡ್ರೋನ್ ಕ್ಯಾಮೆರಾ ಮೂಲಕವೂ ಕಣ್ಗಾವಲಿಟ್ಟು ತಪಾಸಣೆ ನಡೆಸಲಾಗಿದೆ. ಇದೇ ಮೊದಲ ಬಾರಿಗೆ ಭಟ್ಕಳ ನಗರ ಸ್ಫೋಟಿಸುವ ಸಂದೇಶ ಬಂದಿದ್ದು, ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post