ಕಲ್ಪ ಮೀಡಿಯಾ ಹೌಸ್ | ಕಾರವಾರ |
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಉಗ್ರ ಸಂಘಟನೆಯೊAದಿಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಓರ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಶಂಕಿತ ಆರೋಪಿಯನ್ನು ಬನವಾಸಿಯ ದಾಸನಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ (32) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಎನ್’ಐಎ ಅಧಿಕಾರಿಗಳ ತಂಡ ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಶುಕ್ಕೂರ್’ನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಶಕ್ಕೂರ್ ವಿರುದ್ಧ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ, ಕರಾವಳಿಯ ಕುಕ್ಕರ್ ಸ್ಪೋಟಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ ಇದೆ.
ಇದಲ್ಲದೇ ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪವೂ ಸಹ ಇದೆ ಎಂದು ಹೇಳಲಾಗಿದ್ದು, ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
Also read: ಸ್ಪೀಕರ್ ಸ್ಥಾನ ಉಳಿಸಿಕೊಳ್ಳುತ್ತಾ ಬಿಜೆಪಿ? ಯಾರಾಗಲಿದ್ದಾರೆ ಲೋಕಸಭೆ ಅಧ್ಯಕ್ಷರು?
ಅಬ್ದುಲ್ ಶುಕ್ಕೂರ್ ದುಬೈ ನಲ್ಲಿ ಕೆಲಸ ಮಾಡುತ್ತಿದ್ದು ಈತ ನಿಷೇಧಿತ ಪಿಎಫ್’ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಇವನ ಮೇಲಿದೆ.
ಕೆಲವು ದಿನದ ಹಿಂದೆ ಬಕ್ರೀದ್ ಆಚರಣೆಗಾಗಿ ಬನವಾಸಿಯ ದಾಸನ ಕೊಪ್ಪದ ನಿವಾಸಕ್ಕೆ ಆಗಮಿಸಿದ್ದ ಅಬ್ದುಲ್ ಶುಕ್ಕೂರ್’ನನ್ನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್’ನಲ್ಲಿ ನಕಲಿ ದಾಖಲೆ ನೀಡಿದ ಆರೋಪದಡಿ ಎನ್’ಐಎ ತನಿಖೆ ಕೈಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post