ಕಲ್ಪ ಮೀಡಿಯಾ ಹೌಸ್ | ಕಾರವಾರ |
ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾಗಿದ್ದ ಐದು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಮೃತ ಬಾಲಕಿಯನ್ನು ಆವಂತಿಕ(5) ಎಂದು ಗುರುತಿಸಲಾಗಿದೆ. ದುರಂತದಲ್ಲಿ ಶಿರೂರು ಕ್ಯಾಂಟೀನ್ ಮಾಲೀಕರ ಐದು ವರ್ಷದ ಮಗಳು ಕಾಣೆಯಾಗಿದ್ದಳು. ಈಕೆಗಾಗಿ ಹುಡುಕಾಟ ನಡೆಸಲಾಗುತ್ತಿತ್ತು.
Also read: ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಹರಿದ ಬಸ್ | ವ್ಯಕ್ತಿ ದಾರುಣ ಸಾವು
ಇಂದು ಬಾಲಕಿಯ ಮೃತದೇಹ ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇನ್ನು, ದುರಂತದ ಬೆನ್ನಲ್ಲೇ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















