ಕಲ್ಪ ಮೀಡಿಯಾ ಹೌಸ್ | ಕಾಸರಗೋಡು |
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಇಬ್ಬರು ಯುವಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಜಿಪ ಬೈಲಗುತ್ತು ನಿವಾಸಿ ದಿ. ಎಸ್.ಬಿ. ಮುಹಮ್ಮದ್ ಅವರ ಪುತ್ರ ಆಸಿಫ್ ಮುಹಮ್ಮದ್ (41) ಮತ್ತು ನಾಟೆಕಲ್ ನಿವಾಸಿ ಅಬ್ಬಾಸ್ ಹಾಜಿ ಅವರ ಪುತ್ರ ಮುಹಮ್ಮದ್ ಶಫೀಕ್ (23) ಎಂದು ಗುರುತಿಸಲಾಗಿದೆ.
ಐವರು ಗೆಳೆಯರು ವಯನಾಡಿಗೆ ಪ್ರವಾಸ ಹೋಗಿ, ಸೋಮವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ BMW ಕಾರು ಚಟ್ಟಂಚಾಲ್ ತೆಕ್ಕಿಲ್ ಬಳಿ ಬಂದಾಗ ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















