ಕಲ್ಪ ಮೀಡಿಯಾ ಹೌಸ್ | ಕಾಸರಗೋಡು |
ದೀಪಾವಳಿಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನವೇ ಪಟಾಕಿ ದುರಂತಕ್ಕೆ #Fireworks disaster 150ಕ್ಕೂ ಹೆಚ್ಚು ಮಂದಿ ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಕಳೆದ ಮಧ್ಯರಾತ್ರಿ ಪಟಾಕಿ ಕಿಡಿ ಹೊತ್ತಿ ಉರಿದ ಪರಿಣಾಮ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 8 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು, ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Also read: ಮನದ ಭಾವನೆ ವ್ಯಕ್ತಪಡಿಸುವ ಹೃದಯಸ್ಪರ್ಶಿ ಭಾಷೆ ಕನ್ನಡ: ತಹಶೀಲ್ದಾರ್ ಗಿರೀಶ್
ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದ್ದು, ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಪಟಾಕಿ ಸಂಗ್ರಹಣಾ ಕೇಂದ್ರ ಮತ್ತು ಪಟಾಕಿ ಸಿಡಿಸುವ ಸ್ಥಳವು ಹತ್ತಿರದಲ್ಲಿದ್ದು, ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಪಟಾಕಿ ಸಂಗ್ರಹಾಲಯ ಹಾಗೂ ಪಟಾಕಿ ಸಿಡಿಸುವ ಸ್ಥಳಕ್ಕೆ ಕನಿಷ್ಠ 100 ಮೀಟರ್ ಅಂತರವನ್ನು ಕಾಯ್ದುಕೊಳ್ಳುವ ಅವಶ್ಯಕತೆ ಇದ್ದರೂ, ಯಾವುದೇ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿರಲಿಲ್ಲ. ಹಾಗೂ ಪಟಾಕಿಗಳನ್ನು ಸಂಗ್ರಹಿಸಲು ಯಾವುದೇ ಅನುಮತಿಯನ್ನು ತೆಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಕಾಸರಗೋಡು ಸಂಸದ ರಾಜಮೋಹನ್ ಉನ್ನಿತಾನ್ ಘಟನೆಯ ಬಗ್ಗೆ ವಿಸ್ತೃತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post