ಕಲ್ಪ ಮೀಡಿಯಾ ಹೌಸ್ | ಕಾಸರಗೋಡು |
ಜಿಲ್ಲೆಯ ಪೈವಳಿಕೆ- ಚೇವಾರ್ ರಸ್ತೆಯಲ್ಲಿರುವ ಕಟ್ಟದಮನೆ ಸೇತುವೆ ಬಳಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಚಾಲಕ ಸಾವಿಗೀಡಾಗಿದ್ದಾನೆ.
ಅಪಘಾತ ವೇಳೆ ಜತೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಮೃತರನ್ನು ನೇಪಾಳದ ರುನ್ಕಾವ್ ನಿವಾಸಿ ಸುರೇಶ್ ಪೊನ್ ಎಂದು ಗುರುತಿಸಲಾಗಿದೆ.
ಟ್ರ್ಯಾಕ್ಚರ್ ಮಗುಚಿ ಬಿದ್ದಾಗ ಸುರೇಶ್ ಅದರಡಿಯಲ್ಲಿ ಸಿಲುಕಿದ್ದರು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಈತ ಕೆಲಸಕ್ಕೆ ಸೇರಿದ್ದ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post