No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕಸ್ತೂರಿರಂಗನ್ ವರದಿ: ಕೇರಳ, ಮಹಾರಾಷ್ಟ್ರ, ಗೋವಾ ಮುಂದಿದ್ದರೆ ಕರ್ನಾಟಕ ಯಾಕೆ ಹಿಂದೆ? ಡಾ. ಧನಂಜಯ ಸರ್ಜಿ

kalpa News by kalpa News
September 22, 2026
in ರಾಜಕೀಯ
0
Kasturirangan Report Karnataka MLC Dr. Dhananjaya Sarji
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಸ್ತೂರಿರಂಗನ್ ವರದಿ (Kasturirangan Report) ಜಾರಿ ವಿಚಾರದಲ್ಲಿ ಜನರ ಬದುಕು ಮತ್ತು ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳದೆ, ಪಶ್ಚಿಮಘಟ್ಟದ ಪರಿಸರ ಸಂರಕ್ಷಣೆ ಹಾಗೂ ಮಲೆನಾಡಿನ ರೈತರ ಹಿತ ಎರಡನ್ನೂ ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ಹಾಗೂ ವಾಸ್ತವಾಧಾರಿತ ನಿರ್ಧಾರ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ (Dr. Dhananjaya Sarji) ಒತ್ತಾಯಿಸಿದರು.

ವಿಧಾನ ಪರಿಷತ್ತಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಸ್ತೂರಿರಂಗನ್ ವರದಿ ಜಾರಿಯ ಕುರಿತಂತೆ ನೆಲಮಟ್ಟದ ವಾಸ್ತವಾಂಶಗಳನ್ನು ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

20,668 ಚ.ಕಿ.ಮೀ. ಪ್ರದೇಶದ ಪ್ರಸ್ತಾವನೆ

ಕಸ್ತೂರಿರಂಗನ್ ವರದಿಯಡಿ ಕರ್ನಾಟಕದ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESZ)ವಾಗಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರದ ಮಾಹಿತಿಯ ಪ್ರಕಾರ, ಈ ಪೈಕಿ ಸುಮಾರು 16,114 ಚದರ ಕಿಲೋಮೀಟರ್ ಪ್ರದೇಶ ಈಗಾಗಲೇ ವಿವಿಧ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ವರ್ಗಗಳಡಿ ರಕ್ಷಿತವಾಗಿದೆ ಎಂದು ಡಾ. ಸರ್ಜಿ ವಿವರಿಸಿದರು.dk shivakumar led karnataka government 100 days celebration

ಹೀಗಾಗಿ ಉಳಿಯುವ ಸುಮಾರು 4,500 ಚದರ ಕಿಲೋಮೀಟರ್ ಪ್ರದೇಶದಲ್ಲಿ ನೈಸರ್ಗಿಕ ಅರಣ್ಯ ಎಷ್ಟು, ಕೃಷಿ ಭೂಮಿ ಎಷ್ಟು, ತೋಟಗಳು ಮತ್ತು ಜನವಸತಿ ಪ್ರದೇಶಗಳು ಎಷ್ಟು ಎಂಬುದನ್ನು ಸ್ಪಷ್ಟವಾಗಿ ಗುರುತಿಸಬೇಕಿದೆ. ಇದಕ್ಕಾಗಿ ಕೇವಲ ದಾಖಲೆಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳದೆ, ಸರ್ವೆ ನಂಬರ್ ಮಟ್ಟದಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಪರಿಸರ ಸಂರಕ್ಷಣೆ ಹೆಸರಿನಲ್ಲಿ ಮತ್ತೊಂದು ಪರಿಸರ ಹಾನಿ ಬೇಡ

ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಮತ್ತೊಂದು ರೀತಿಯ ಪರಿಸರ ಹಾನಿಗೆ ಕಾರಣವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಡಾ. ಸರ್ಜಿ ಹೇಳಿದರು.

ಶಿವಮೊಗ್ಗದಲ್ಲಿ ಸ್ಥಳೀಯವಾಗಿ ಕಲ್ಲು ಲಭ್ಯವಾಗದ ಕಾರಣ ದೂರದ ಜಿಲ್ಲೆಗಳಿಂದ ಪ್ರತಿದಿನ ಸುಮಾರು 100 ಲಾರಿಗಳಲ್ಲಿ ಕಲ್ಲು ಸಾಗಿಸಲಾಗುತ್ತಿದೆ ಎಂದು ಅವರು ಉದಾಹರಿಸಿದರು. ಸುಮಾರು 200ರಿಂದ 250 ಕಿ.ಮೀ. ದೂರದವರೆಗೆ ಕಲ್ಲು ಸಾಗಿಸುವುದರಿಂದ ಅಪಾರ ಪ್ರಮಾಣದ ಡೀಸೆಲ್ ಬಳಕೆಯಾಗುತ್ತಿದೆ. ಇದರಿಂದ ಇಂಧನ ಬಳಕೆ ಮತ್ತು ವಾಹನಗಳಿಂದ ಉಂಟಾಗುವ ಮಾಲಿನ್ಯ ಹೆಚ್ಚಾಗುತ್ತದೆ.

Also Read>> ಆದಿಲಾಬಾದ್ : ನವಜಾತ ಶಿಶುಗಳ ಘಟಕದಲ್ಲೇ ಅಗ್ನಿ ಅವಘಡ: ಇಬ್ಬರು ಕಂದಮ್ಮಗಳ ದುರಂತ ಅಂತ್ಯ

ಹೀಗಾಗಿ ಪರಿಸರ ಸಂರಕ್ಷಣೆಗಾಗಿ ಕೈಗೊಳ್ಳುವ ನೀತಿಯೇ ಪರೋಕ್ಷವಾಗಿ ಹೆಚ್ಚಿನ ಇಂಧನ ಬಳಕೆ ಮತ್ತು ಮಾಲಿನ್ಯಕ್ಕೆ ಕಾರಣವಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು.

ಭದ್ರಾ ಮೇಲ್ದಂಡೆ ಯೋಜನೆ ವಿಳಂಬದ ಬಗ್ಗೆ ಪ್ರಸ್ತಾಪ

ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬದ ಬಗ್ಗೆಯೂ ಡಾ. ಸರ್ಜಿ ಸದನದ ಗಮನ ಸೆಳೆದರು.Christ King

ಯೋಜನೆಯ ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಎತ್ತುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವ್ಯವಸ್ಥೆ ಸಕಾಲದಲ್ಲಿ ಪೂರ್ಣಗೊಂಡಿದ್ದರೆ ಭದ್ರಾ ಜಲಾಶಯಕ್ಕೆ ಹೆಚ್ಚುವರಿ ನೀರು ಲಭ್ಯವಾಗುತ್ತಿತ್ತು. ಇದರಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗಬಹುದಿತ್ತು ಎಂದು ಅವರು ಹೇಳಿದರು.

ತುಂಗಾ ನದಿಯಲ್ಲಿ ಲಭ್ಯವಾಗುವ ಹೆಚ್ಚುವರಿ ನೀರು ಕೆಳಹರಿವಿನತ್ತ ಹರಿದುಹೋಗುತ್ತಿರುವ ಸಂದರ್ಭದಲ್ಲಿ, ಅದನ್ನು ವೈಜ್ಞಾನಿಕವಾಗಿ ಭದ್ರಾ ಜಲಾಶಯಕ್ಕೆ ಎತ್ತುವ ವ್ಯವಸ್ಥೆಯನ್ನು ಶೀಘ್ರ ಪೂರ್ಣಗೊಳಿಸುವ ಅಗತ್ಯವಿದೆ ಎಂದು ಡಾ. ಸರ್ಜಿ ತಿಳಿಸಿದರು.

ಈ ಯೋಜನೆಗೆ ಅಗತ್ಯವಿರುವ 220 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗಕ್ಕೆ ಅರಣ್ಯ ಭೂಮಿ ಬಳಸುವ ಅನುಮತಿ ಪ್ರಕ್ರಿಯೆ 2019ರಿಂದ ನಡೆಯುತ್ತಿದ್ದು, 2026ರ ಜುಲೈ 10ರಂದು ಮೊದಲ ಹಂತದ ಅನುಮೋದನೆ ದೊರೆತಿದೆ. ಈ ಬೆಳವಣಿಗೆಯು ಯೋಜನೆಯ ಅನುಷ್ಠಾನದಲ್ಲಿನ ವಿಳಂಬದ ಗಂಭೀರತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

Kasturirangan Report : ಕೇರಳ, ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ ಕರ್ನಾಟಕವೂ ಮುಂದಾಗಲಿ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ ಆರು ರಾಜ್ಯಗಳ ಪ್ರಸ್ತುತ ಸ್ಥಿತಿಯನ್ನೂ ಕರ್ನಾಟಕ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಡಾ. ಸರ್ಜಿ ಹೇಳಿದರು.

ಕೇರಳವು ತನ್ನ ಪ್ರಸ್ತಾವಿತ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯನ್ನು 13,108 ಚದರ ಕಿ.ಮೀ.ಯಿಂದ 9,993.7 ಚದರ ಕಿ.ಮೀ.ಗೆ ಪರಿಷ್ಕರಿಸಿದ್ದು, ನಂತರವೂ ಮತ್ತಷ್ಟು ಪರಿಷ್ಕರಣೆಯ ಪ್ರಸ್ತಾವನೆ ಸಲ್ಲಿಸಿದೆ ಎಂದು ಅವರು ತಿಳಿಸಿದರು.

2026ರ ಜುಲೈ ವೇಳೆಗೆ ಗೋವಾ ಮತ್ತು ಗುಜರಾತ್‌ಗೆ ಸಂಬಂಧಿಸಿದ ಪ್ರದೇಶ ನಿಗದಿಯ ವಿಚಾರ ಬಹುತೇಕ ಒಪ್ಪಂದದ ಹಂತ ತಲುಪಿದೆ. ಮಹಾರಾಷ್ಟ್ರದ ಪರಿಷ್ಕೃತ ಪ್ರಸ್ತಾವನೆ ಕೇಂದ್ರದ ತಜ್ಞ ಸಮಿತಿಯ ಪರಿಶೀಲನೆಯಲ್ಲಿದೆ. ಆದರೆ ಕರ್ನಾಟಕದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಅಂತಿಮ ಒಮ್ಮತ ಇನ್ನೂ ಮೂಡಿಲ್ಲ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ, “ಇತರ ರಾಜ್ಯಗಳು ಆಕ್ಷೇಪಣೆಗಳು, ಪರ್ಯಾಯ ನಕ್ಷೆಗಳು ಮತ್ತು ಭೌತಿಕ ಪರಿಶೀಲನೆಗಳೊಂದಿಗೆ ಪ್ರಕ್ರಿಯೆಯನ್ನು ಮುಂದುವರಿಸುತ್ತಿರುವಾಗ ಕರ್ನಾಟಕದಲ್ಲಿ ಅಂತಿಮ ವೈಜ್ಞಾನಿಕ ಪ್ರಸ್ತಾವನೆ ಇನ್ನೂ ಏಕೆ ಸಿದ್ಧವಾಗಿಲ್ಲ?” ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಡಾ. ಸರ್ಜಿ ಪ್ರಶ್ನಿಸಿದರು.

ನೆಲಮಟ್ಟದ ವೈಜ್ಞಾನಿಕ ಸಮೀಕ್ಷೆಗೆ ಒತ್ತಾಯ

ಪಶ್ಚಿಮಘಟ್ಟದ ಆರು ರಾಜ್ಯಗಳಿಂದ ಬಂದಿರುವ ಆಕ್ಷೇಪಣೆಗಳು ಮತ್ತು ಪರ್ಯಾಯ ಪ್ರಸ್ತಾವನೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಮಾಜಿ ಅರಣ್ಯ ಮಹಾನಿರ್ದೇಶಕ ಸಂಜಯ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕವೂ ತನ್ನ ನಿಲುವನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕೇರಳದ ಮಾದರಿಯಲ್ಲಿ ಕರ್ನಾಟಕದಲ್ಲೂ ನೆಲಮಟ್ಟದ ಸಮಗ್ರ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಪ್ರಸ್ತಾವಿತ ಪ್ರದೇಶದಲ್ಲಿ ನಿಜವಾಗಿಯೂ ಅರಣ್ಯ ಪ್ರದೇಶ ಯಾವುದು, ಕೃಷಿ ಮತ್ತು ತೋಟಗಾರಿಕೆ ಪ್ರದೇಶ ಯಾವುದು, ಜನವಸತಿ ಎಲ್ಲಿ ಇದೆ ಎಂಬುದನ್ನು ನಿಖರವಾಗಿ ಗುರುತಿಸಿ, ಅದರ ಆಧಾರದ ಮೇಲೆ ಸ್ಪಷ್ಟವಾದ ಅಂತಿಮ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಡಾ. ಸರ್ಜಿ ಒತ್ತಾಯಿಸಿದರು.

“ಕಾಡನ್ನೂ ಉಳಿಸೋಣ–ರೈತರನ್ನೂ ಉಳಿಸೋಣ”

ತಾವು ಪರಿಸರ ಸಂರಕ್ಷಣೆಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ ಡಾ. ಸರ್ಜಿ, ಪಶ್ಚಿಮಘಟ್ಟ ಉಳಿಯಬೇಕು, ಕಾಡು ಬೆಳೆಬೇಕು, ನದಿಗಳು ಸಂರಕ್ಷಿಸಲ್ಪಡಬೇಕು ಮತ್ತು ವನ್ಯಜೀವಿಗಳಿಗೆ ರಕ್ಷಣೆ ದೊರೆಯಬೇಕು ಎಂಬುದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಆದರೆ ತಲೆಮಾರುಗಳಿಂದ ಕಾಡು ಮತ್ತು ಪರಿಸರವನ್ನು ಕಾಪಾಡಿಕೊಂಡು ಬಂದಿರುವ ಮಲೆನಾಡಿನ ರೈತರ ಬದುಕಿಗೂ ರಕ್ಷಣೆ ದೊರೆಯಬೇಕು. ಪರಿಸರ ಸಂರಕ್ಷಣೆ ಮತ್ತು ಜನರ ಜೀವನೋಪಾಯದ ನಡುವೆ ಸಮತೋಲನ ಸಾಧಿಸುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು.

“ನಾವು ಪರಿಸರ ಸಂರಕ್ಷಣೆಯ ವಿರೋಧಿಗಳಲ್ಲ. ಪಶ್ಚಿಮಘಟ್ಟ ಉಳಿಯಬೇಕು, ಕಾಡು ಬೆಳೆಯಬೇಕು, ನದಿಗಳು ಉಳಿಯಬೇಕು, ವನ್ಯಜೀವಿಗಳು ರಕ್ಷಿಸಲ್ಪಡಬೇಕು. ಆದರೆ ಕಾಡನ್ನು ತಲೆಮಾರುಗಳಿಂದ ಕಾಪಾಡಿಕೊಂಡು ಬಂದಿರುವ ರೈತರ ಬದುಕನ್ನೂ ಉಳಿಸಬೇಕು. ಜನರ ಬದುಕು ಮತ್ತು ಭಾವನೆಗಳ ಜೊತೆ ರಾಜಕೀಯ ಮಾಡದೆ, ಕಾಡನ್ನೂ ಉಳಿಸೋಣ–ರೈತರನ್ನೂ ಉಳಿಸೋಣ” ಎಂದು ಡಾ. ಧನಂಜಯ ಸರ್ಜಿ ಹೇಳಿದರು.

PES Shivamogga

ಮಾದರಿ ಸಂಗ್ರಹ; ತಪ್ಪು ಕಂಡುಬಂದರೆ ಕಠಿಣ ಕ್ರಮ

ಪರಿಶೀಲನೆಯ ಸಂದರ್ಭದಲ್ಲಿ ಅಧಿಕಾರಿಗಳು ಅಡಿಕೆಯ ಕೆಲವು ಮಾದರಿಗಳನ್ನು ಪಡೆದುಕೊಂಡರು. ಈ ಮಾದರಿಗಳ ಪರಿಶೀಲನೆಯ ಬಳಿಕ ಅಡಿಕೆಗೆ ಕೃತಕ ಅಥವಾ ನಿಷೇಧಿತ ರಾಸಾಯನಿಕ ಬಣ್ಣ ಬಳಕೆ ಮಾಡಿರುವುದು ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಮೈತ್ರಿ ಎಚ್ಚರಿಕೆ ನೀಡಿದರು.

ರಾಸಾಯನಿಕಗಳನ್ನು ಬಳಸದೆ ಅಡಿಕೆಯನ್ನು ನಿಯಮಾನುಸಾರ ಸಂಸ್ಕರಿಸಿ, ಗುಣಮಟ್ಟ ಕಾಪಾಡಿಕೊಂಡು ವಹಿವಾಟು ನಡೆಸಬೇಕು. ರೈತರ ಶ್ರಮಕ್ಕೆ ಸೂಕ್ತ ಬೆಲೆ ಮತ್ತು ನ್ಯಾಯ ದೊರೆಯುವಂತೆ ವ್ಯಾಪಾರಿಗಳು ಹಾಗೂ ಸಂಸ್ಕರಣಾ ಘಟಕಗಳ ಮಾಲೀಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಪರಿಶೀಲನೆ ವೇಳೆ ತಹಶೀಲ್ದಾರ್ ರಾಜೀವ್, ಕಂದಾಯ ಇಲಾಖೆಯ ಅಧಿಕಾರಿಗಳಾದ ಲಿಂಗರಾಜ್, ಕೀರ್ತಿಕುಮಾರ್, ಶ್ರವಣಕುಮಾರ್, ಶ್ವೇತಾ, ಸುಮಾ, ಮನೋಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Dr. Dhananjaya SarjiKasturirangan reportWestern Ghatಕಸ್ತೂರಿರಂಗನ್ ವರದಿಡಾ. ಧನಂಜಯ ಸರ್ಜಿಪರಿಸರ ಸಂರಕ್ಷಣೆಪಶ್ಚಿಮಘಟ್ಟಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆದಿಲಾಬಾದ್ : ನವಜಾತ ಶಿಶುಗಳ ಘಟಕದಲ್ಲೇ ಅಗ್ನಿ ಅವಘಡ: ಇಬ್ಬರು ಕಂದಮ್ಮಗಳ ದುರಂತ ಅಂತ್ಯ

Next Post

ಎರಡು ಬೈಕ್’ಗಳ ಭಾರೀ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ದಾರುಣ ಸಾವು

kalpa News

kalpa News

Next Post
Shivamogga Bike Accident On Shikaripura Road 1 Death

ಎರಡು ಬೈಕ್'ಗಳ ಭಾರೀ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ದಾರುಣ ಸಾವು

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL