ಕಲ್ಪ ಮೀಡಿಯಾ ಹೌಸ್ | ಕಥುವಾ |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಹೀರಾನಗರದಲ್ಲಿ ನಿನ್ನೆ ತಡರಾತ್ರಿ ಭಾರೀ ಸ್ಪೋಟ ಸಂಭವಿಸಿದ್ದು, ಘಟನೆ ಕುರಿತಂತೆ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೀರಾ ನಗರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಸಂಜೆಯ ವೇಳೆಗೆ ಬಿಪಿಪಿ ಸಾನ್ಯಾಲ್ ಬಳಿ ಸ್ಫೋಟದ ರೀತಿಯ ಭಯಾನಕ ಶಬ್ದ ಕೇಳಿಸಿದೆ ಎಂದು ವರದಿಯಾಗಿದೆ.
ಈ ಸ್ಫೋಟದಿಂದ ಯಾವುದೇ ಗಾಯದ ವರದಿಯಾಗಿಲ್ಲ. ಪ್ರಾಥಮಿಕ ಶೋಧದ ವೇಳೆ ಯಾವುದೇ ಅನುಮಾನಾಸ್ಪದ ಒಳನುಗ್ಗುವಿಕೆ ಅಥವಾ ಚಲನವಲನಗಳು ಕಂಡುಬಂದಿಲ್ಲ. ವಿಧಿವಿಜ್ಞಾನ ತಂಡವು ಸ್ಫೋಟವಾದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿರುವುದರಿಂದ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ.
Also read: ಆಟವಾಡಿದ್ದು ಸಾಕು, ಓದಿಕೋ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 9 ವರ್ಷದ ಬಾಲಕಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post