ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಭೀಕರವಾಗಿ ಹತ್ಯೆ ಮಾಡಿದ ಆರೋಪಿಗಳನ್ನು ಎನ್’ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕ್ರಮಕ್ಕೆ ಇಡಿಯ ದೇಶವೇ ಸಂಭ್ರಮಿಸುತ್ತಿದ್ದರೆ, ಕೆಲವು ನಾಯಕರು ಮಾತ್ರ ಕ್ಯಾತೆ ತೆಗೆದಿದ್ದಾರೆ.
ತೆಲಂಗಾಣ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಅತ್ಯಾಚಾರ ಮಾಡುವುದು ಅತ್ಯಂತ ಹೇಯ ಕೃತ್ಯ. ಕಾನೂನಿನ ಚೌಕಟ್ಟಿನಲ್ಲಿ ಇಂಥವರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು. ಅತ್ಯಾಚಾರದಂತಹ ಹೇಯ ಕೃತ್ಯ ಮಾಡಿದವರನ್ನು ನಾನು ಬೆಂಬಲಿಸದಿದ್ದರೂ ಎನ್’ಕೌಂಟರ್ ಮೂಲಕ ಅವರನ್ನು ಹತ್ಯೆ ಮಾಡುವುದು ಸಮಾಜಕ್ಕೆ ಅಂಟಿದ ಕಳಂಕ. ಅನ್ಯಾಯಕ್ಕೊಳಗಾದವರಿಗೆ ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಬೇಕಾಗಿರುವುದು ನಿಜವಾದರೂ ಈ ರೀತಿ ರೀತಿ ಬೇಕಾಗಿಲ್ಲ ಎಂದಿದ್ದಾರೆ.
ಇನ್ನು ಈ ಕುರಿತಂತೆ ಮಾತನಾಡಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ, ಆರೋಪಿಗಳನ್ನು ನ್ಯಾಯಾಲಯವೇ ನೇಣಿಗೆ ಏರಿಸುತ್ತಿತ್ತು. ಆದರೆ, ತೆಲಂಗಾಣ ಪೊಲೀಸರು ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post