ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಅವರನ್ನು ಇಡಿ ಮುಖ್ಯ ಕಚೇರಿಗೆ ಕರೆತರಲಾಗಿದೆ ಎಂದು ವರದಿಯಾಗಿದೆ.
ಕೇಜ್ರಿವಾಲ್ ಅವರ ನಿವಾಸದಿಂದ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಐದು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಕೇಜ್ರಿವಾಲ್ ಅವರನ್ನು ಸದ್ಯ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಗೆ ಕರೆತರಲಾಗಿದ್ದು, ರಾತ್ರಿ ಅವರನ್ನು ತಿಹಾರ್ ಜೈಲಿಗೆ ರವಾನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಇನ್ನು, ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್ ಕದ ತಟ್ಟಿರುವ ಎಎಪಿ, ಇಂದು ಮಧ್ಯರಾತ್ರಿಯೇ ತುರ್ತು ವಿಚಾರಣೆ ನಡೆಸುವಂತೆ ಕೋರಿದೆ. ಆದರೆ, ಮಾಹಿತಿಯಂತೆ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದೆ ಎಂದು ಹೇಳಲಾಗಿದೆ.
ಎಎಪಿ ಮುಖಂಡೆ, ದೆಹಲಿ ಸಚಿವೆ ಅತಿಶ್ ಮಾತನಾಡಿದ್ದು, ಕೇಜ್ರಿವಾಲ್ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ. ಕಂಬಿಗಳ ಹಿಂದಿನಿಂದಲೇ ತಮ್ಮ ಕರ್ತವ್ಯ ನಿರ್ವಹಿಸುತ್ತಾ ಎಂದಿದ್ದಾರೆ.
ಇನ್ನು, ಕೇಜ್ರಿವಾಲ್ ಬಂಧನ ವಿರೋಧಿಸಿ ಎಎಪಿ ಕಾರ್ಯಕರ್ತರು ಅವರ ನಿವಾಸದ ಮುಂದೆ ಹಾಗೂ ಇಡಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮವನ್ನು ವಿರೋಧಿಸಿ ಕೇಂದ್ರ ಸರ್ಕಾರ ಹಾಗೂ ಇಡಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post