ಕಲ್ಪ ಮೀಡಿಯಾ ಹೌಸ್ | ಕೇರಳ |
ಇಲ್ಲಿನ ಮಲಯಾಳಂ ಚಿತ್ರರಂಗದಲ್ಲಿ #Malayalam Film Industry ಕರಾಳ ಲೈಂಗಿಕ ಕಿರುಕುಳದ ಅನುಭವವನ್ನು ಹಲವು ಕಲಾವಿದರು ಹಂಚಿಕೊಂಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಸರ್ಕಾರ ಇದರ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದೆ.
ಸಿಎಂ ಪಿಣರಾಯಿ ವಿಜಯನ್ #CM Pinarayi Vijayan ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ್ದು, ಆನಂತರ ಸರ್ಕಾರ ಭಾನುವಾರ ಏಳು ಸದಸ್ಯರ ತಂಡವನ್ನು ರಚಿಸಿದೆ.
Also read: GOOD NEWS | ಲಡಾಕ್’ನಲ್ಲಿ 5 ನೂತನ ಜಿಲ್ಲೆ ರಚನೆ | ಅಮಿತ್ ಶಾ ಘೋಷಣೆ
ಐಜಿ ಸ್ಪಜ್ಜನ್ ಕುಮಾರ್ ನೇತೃತ್ವದ ವಿಶೇಷ ತಂಡದಲ್ಲಿ ನಾಲ್ವರು ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ. ಕ್ರೈಂ ಬ್ರಾಂಚ್ ಎಡಿಜಿಪಿ ಎಚ್. ವೆಂಕಟೇಶ್ ತಂಡದ ಕಾರ್ಯನಿರ್ವಹಣೆಯನ್ನು ನೋಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
2017ರಲ್ಲಿ ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟಿಯೊಬ್ಬರ ಲೈಂಗಿಕ ದೌರ್ಜನ್ಯದ ನಂತರ, ಕೇರಳ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ನೇಮಿಸಿತು. ಈ ಸಮಿತಿ ವರದಿಯು ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಹಿರಂಗಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post