ಕಲ್ಪ ಮೀಡಿಯಾ ಹೌಸ್ | ಮಲಪ್ಪುರಂ |
ದೇವಾಲಯದ ಉತ್ಸವದ ವೇಳೆ ನಿಯಂತ್ರಣ ಕಳೆದುಕೊಂಡ ಆನೆಯೊಂದು #Elephant ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿ, ವ್ಯಕ್ತಿಯೊಬ್ಬನನ್ನು ಎತ್ತಿ ಬಿಸಾಡಿರುವ ಘಟನೆ ಕೇರಳದ #Kerala ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ.
ಪಾಕ್ಕಾತು ಶ್ರೀ ಕುಟ್ಟನ್ ಎಂಬ ಹೆಸರಿನ ಆನೆ ಉತ್ಸವದ ವೇಳೆ ನಿಯಂತ್ರಣ ಕಳೆದುಕೊಂಡಿತ್ತು.
Also Read>> Minister George Orders Technical Investigation into Bidadi Waste-to-Energy Power Unit incident
ವಾದ್ಯಗಳ ಸದ್ದು, ಜನರ ಗದ್ದಲದ ನಡುವೆ ನಿಯಂತ್ರಣ ಕಳೆದುಕೊಂಡು ವ್ಯಕ್ತಿಯೊಬ್ಬನನ್ನು ಎತ್ತಿ ಎಸೆದಿದೆ. ಈ ವೇಳೆ ಜನರ ಮೇಲೂ ಸಹ ಆನೆ ದಾಳಿ ನಡೆಸಿದ್ದು, 29ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಆನೆಯ ಏಕಾಏಕಿ ದಾಳಿಯಿಂದಾಗಿ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ತತಕ್ಷಣವೇ ಮಾವುತ ಆನೆಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ.
ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ ನೂರಾರು ಮಂದಿ ನೆರೆದಿದ್ದರು. ಉತ್ಸವದಲ್ಲಿ ಕನಿಷ್ಠ ಐದು ಆನೆಗಳು ಅಂಲಕಾರಭೂಷಿತವಾಗಿ ಪಾಲ್ಗೊಂಡಿದ್ದವು.
ಮೂಲಗಳ ಪ್ರಕಾರ, ಆನೆ ದಾಳಿಗೆ ಒಳಗಾದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಕೋಟಕ್ಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post