ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ನ.30ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.
ಏನು ಕಾರ್ಯಕ್ರಮ?
ನ.30ರಂದು ನಗರದ ಫ್ರೀಡಂ ಪಾರ್ಕ್’ನಲ್ಲಿ ನಡೆಯಲಿರುವ ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪದಲ್ಲಿ ಪಾಲ್ಗೊಳ್ಳಲು ಕೇರಳ ರಾಜ್ಯಪಾಲರು ನಗರದಕ್ಕೆ ಭೇಟಿ ನೀಡಲಿದ್ದಾರೆ.

ನಂತರ ಮಧ್ಯಾಹ್ನ 12.50ಕ್ಕೆ ಸರ್ಕ್ಯೂಟ್ ಹೌಸ್’ಗೆ ತೆರಳಿ ವಿಶ್ರಾಂತಿ ಪಡೆಯಲಿರುವ ಅವರು, ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.
ಕೇರಳ ರಾಜ್ಯಪಾಲರ ಭೇಟಿಯ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆ ಹಾಗೂ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post