ಕಲ್ಪ ಮೀಡಿಯಾ ಹೌಸ್ | ಕೇರಳ |
ಕೇರಳದ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಎಂವಿ ವಾನ್ ಹೈ 503 (MVWanHai 503)ರಲ್ಲಿ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ.
ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಪಡೆ ಮೂಲಗಳು ತಿಳಿಸಿವೆ.
270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು, ಬೆಳಗ್ಗೆ 10:30ರ ಸುಮಾರಿನಲ್ಲಿ ಸಮುದ್ರ ಮಧ್ಯದಲ್ಲಿ ಎಂವಿ ವಾನ್ ಹೈ 503 ಹಡಗಿನಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಮುಂಬೈ ಕಡಲ ಕಾರ್ಯಾಚಾರಣೆ ಕೇಂದ್ರದಿಂದ ಮಾಹಿತಿ ಪಡೆಯಲಾಯಿತು. ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಆಗಿದ್ದು, ಕೊಲೊಂಬೊದಿಂದ ಮುಂಬೈಗೆ ತೆರಳುತಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕ ಪಡೆ ಕೊಚ್ಚಿಯಲ್ಲಿ ನಿಲ್ಲಿಸಲು ನಿರ್ಧರಿಸಿದ್ದ ಐಎನ್‌ಎಸ್ ಸೂರತ್ ನ್ನು ನೆರವಿಗೆ ಕಳುಹಿಸಿದ್ದಾರೆ. ಜೂನ್ 10 ರಂದು ಆಗಮಿಸುವ ನಿರೀಕ್ಷೆಯಿತ್ತು ಎಂದು ರಕ್ಷಣಾ ಪಡೆ PRO ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post