ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ತನ್ನ ಟೀಸರ್ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿ, ಭಾರೀ ಕುತೂಹಲ ಕೆರಳಿಸಿರುವ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 16ರಂದು ಬೆಳ್ಳಿ ಪರದೆಯ ಮೇಲೆ ರಾಖಿ ಭಾಯ್ ಅಬ್ಬರಿಸಲಿದ್ದಾನೆ.
ಟೀಸರ್ ಬಿಡುಗಡೆಯಾದ ನಂತರ ಚಿತ್ರ ಬಿಡುಗಡೆ ದಿನಾಂಕದ ಬಗ್ಗೆ ವಿಶ್ವದಾದ್ಯಂತ ಭಾರೀ ಕುತೂಹಲ ಸೃಷ್ಠಿಯಾಗಿತ್ತು. ಚಿತ್ರ ಬಿಡುಗಡೆ ವಿಚಾರವಾಗಿ ಸಾಕಷ್ಟು ದಿನಗಳಿಂದಲೂ ಚಿತ್ರತಂಡ ಕುತೂಹಲ ಉಳಿಸಿಕೊಂಡಿತ್ತು. ಇದೀಗ ಚಿತ್ರತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಮುಂಬರವು ಜುಲೈ 16ರಂದು ಚಿತ್ರ ಬಿಡುಗಡೆಯಾಗಲಿದೆ. ಕನ್ನಡದ ಮೊದಲ ಪ್ಯಾನ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಜಿಎಫ್ 2 ಒಂದೇ ಬಾರಿಗೆ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.
#KGFChapter2 Worldwide Theatrical Release On July 16th, 2021.#KGFChapter2onJuly16@TheNameIsYash @prashanth_neel @VKiragandur @hombalefilms @duttsanjay @TandonRaveena @SrinidhiShetty7 @prakashraaj @BasrurRavi @bhuvangowda84 @excelmovies @AAFilmsIndia @VaaraahiCC @PrithvirajProd pic.twitter.com/ch1yq07TdA
— Hombale Films (@hombalefilms) January 29, 2021
ಕೆಜಿಎಫ್ ಚಾಪ್ಟರ್ 2ನಲ್ಲಿ ಯಶ್ ರಾಕಿ ಭಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪವರ್ ಫುಲ್ ಖಳನಾಯಕ ಅಧೀರನ ಪಾತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ. ಇನ್ನು ಮತ್ತೋರ್ವ ಬಾಲಿವುಡ್ ನಟಿ ರವೀನಾ ಟಂಡನ್ ಈ ಚಿತ್ರದಲ್ಲಿ ರಾಜಕಾರಣಿ ಪಾತ್ರ ಮಾಡಿದ್ದಾರೆ.
ಯೂಟ್ಯೂಬ್ನಲ್ಲಿ ಕೆಜಿಎಫ್ 2 ಸಿನಿಮಾ ಟೀಸರ್ ಅನ್ನು 16 ಕೋಟಿ 32 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post