ಮುಂಬೈ: ಭಾರೀ ನಿರೀಕ್ಷೆ ಹುಟ್ಟಿಸಿರುವ ದಬಾಂಗ್-3 ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಇಂಟರ್’ನೆಟ್’ನಲ್ಲಿ ಭಾರೀ ಸುದ್ದಿ ಮಾಡಿದೆ.
ಟ್ರೈಲರ್ ಬಿಡುಗಡೆಯಾಗಿ ಕೇವಲ ಒಂದು ಗಂಟೆಯೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಪೊಲೀಸ್ ಅಧಿಕಾರಿ ಚುಲ್ ಬುಲ್ ಪಾಂಡೆಯಾಗಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದು, ಇವರ ಎದುರು ಖಳನಾಯಕನಾಗಿ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ.
ಡಿಸೆಂಬರ್ 20ರಂದು ಚಿತ್ರ ತೆರೆಗೆ ಬರಲಿದ್ದು, ಪ್ರಭುದೇವ ಚಿತ್ರದ ನಿರ್ದೇಶನ ಮಾಡಿದ್ದು, ಸೋನಾಕ್ಷಿ ಸಿನ್ಹಾ ನಾಯಕಿಯಾಗಿ ನಟಿಸಿದ್ದಾರೆ.
Discussion about this post