No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

kalpa News by kalpa News
March 12, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ. ವಸುಂಧರ ಭೂಪತಿ ಎಂದು ವಿಷಾದ ವ್ಯಕ್ತಪಡಿಸಿದರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಮಾ. 11 ರಂದು ನವಿಲೆ ಆವರಣದ ಕೃಷಿ ಮಹಾವಿದ್ಯಾಲಯದ ವಿವಿಧೋದ್ದೇಶ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.

ನೆರೆದಿರುವ ಮಹಿಳಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯರನ್ನು ಕುರಿತು, ನಮ್ಮೆಲ್ಲರ ತಾಯಿ ನಮ್ಮನ್ನು ಹೆಣ್ಣೆಂದು ಹೆರಲಿಲ್ಲದಿದ್ದರೆ ಇಂದು ನಾವು ಇಲ್ಲಿ ಇರುತ್ತಿರಲಿಲ್ಲ. ಗಂಡು ಮಕ್ಕಳಿಗಿಂತ ಹೆಣ್ಣು ಯಾವುದರಲ್ಲಿಯೂ ಕಮ್ಮಿ ಇಲ್ಲ. ಪ್ರಸ್ತುತ ಹೆಣ್ಣು ಪುರುಷರಂತೆಯೇ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾಳೆ. ಇಂತಹ ಮುಂದುವರೆದ, ವಿದ್ಯಾವಂತರು ಹೆಚ್ಚಿರುವ ಸಮಾಜದಲ್ಲಿ ಇಂದಿಗೂ ಸಹ ಹೆಣ್ಣು ಹೋರಾಟ ಮಾಡಿ ತನ್ನ ಸ್ಥಾನವನ್ನು ಪಡೆಯಬೇಕಿದೆ. ಲಿಂಗ ತಾರತಮ್ಯ, ವೇತನದಲ್ಲಿ ತಾರತಮ್ಯ ಹೋಗಲಾಡಿಸಬೇಕೆಂದರೆ, ಪ್ರತಿಯೊಬ್ಬರೂ ಹೆಣ್ಣನ್ನು ಗೌರವಿಸಬೇಕು, ಪ್ರೀತಿಸಬೇಕು ಎಂದು ಅವರು ಕರೆ ನೀಡಿದರು.

ಮಹಿಳೆ ಸಶಕ್ತಳು, ಮಹಿಳೆ ಕುಟುಂಬದ ಬೆನ್ನೆಲುಬು. ಅವಳು ಕುಟುಂಬದ ನಿರ್ವಹಣೆಯಿಂದ ಹಿಡಿದು ಎಲ್ಲಾ ಉದ್ಯೋಗ ಕ್ಷೇತ್ರಗಳಲ್ಲಿಯೂ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಸಶಕ್ತಳು. ಅಲ್ಲದೆ, ವಿದ್ಯಾರ್ಥಿನಿಯರು ಮೊದಲು ಶಿಕ್ಷಣ ಮುಗಿಸಿ, ಆರ್ಥಿಕವಾಗಿ ಸಬಲರಾದ ನಂತರ ನಿಮ್ಮ ಭಾವನೆಗಳಿಗೆ ಸ್ಪಂದಿಸುವ, ಹೆಣ್ಣೆಂದು ಗೌರವಿಸುವಂತ ವರನನ್ನು ವರಿಸಬೇಕೆಂದು ಕಿವಿ ಮಾತು ಹೇಳಿದರು. ತಮ್ಮ ಹೆಚ್ಚಿನ ಸಮಯವನ್ನು ಓದಿಗೆ ಮೀಸಲಿಡಿ ಎಂದರು.

ಕೆಲವು ಕಡೆ ಇನ್ನೂ ಹೆಣ್ಣು ರಜಸ್ವಾಲೆಯಾದರೆ, ಹೆರಿಗೆಯಾದರೆ ಆಕೆಯನ್ನು ಸರಿಯಾದ ಪೌಷ್ಠಿಕ ಆಹಾರ ಕೊಡದೆ ಮನೆಯಿಂದ ಹೊರಗೆ ಇರಿಸುವಂತ ಮೂಢ ಸಂಪ್ರದಾಯಗಳು ಪ್ರಚಲಿತದಲ್ಲಿವೆ. ಇಂತಹ ಮೂಢನಂಬಿಕೆಗಳು ನಶಿಸಬೇಕಿದೆ. ಪ್ರತಿಯೊಬ್ಬ ಪುರುಷ ಹೆಣ್ಣನ್ನು ತಂಗಿಯಾಗಿ, ಅಕ್ಕನಾಗಿ, ತಾಯಿಯಾಗಿ, ಮಗಳಾಗಿ, ಹೆಂಡತಿಯಾಗಿ, ಸ್ನೇಹಿತೆಯಾಗಿ ಪ್ರೀತಿ, ಗೌರವರಿಂದ ಕಾಣಬೇಕಿದೆ. ಆಗ ಮಾತ್ರ ಒಂದು ಒಳ್ಳೆಯ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಗೌರವಾನ್ವಿತ ಆಡಳಿತ ಮಂಡಳಿ ಸದಸ್ಯರಾದ ನೀತು ಯೋಗಿರಾಜ್ ಪಾಟೀಲ್ ಮಾತನಾಡಿ, ನಾವು ಹೆಣ್ಣಾಗಿ ಜನ್ಮತಾಳಿದ್ದಕ್ಕೆ ಹೆಮ್ಮೆ ಪಡಬೇಕು. ದೇವರು ಹೆಣ್ಣಿಗೆ ಇನ್ನೊಂದು ಜೀವವನ್ನು ಸೃಷ್ಟಿಸುವಂಥ ಶಕ್ತಿಯನ್ನು ನೀಡಿದ್ದಾನೆ. ಹೆಣ್ಣು ತಾನು ಸಬಲಳೆನ್ನುವುದಕ್ಕೆ ಬಾಹ್ಯದಿಂದ ಯಾವ ಪ್ರಚೋದನೆಯನ್ನು ಬಯಸದೆ ತನ್ನನ್ನು ತಾನೇ ಹುರಿದುಂಬಿಸಿಕೊಳ್ಳಬೇಕಿದೆ. ಹೆಣ್ಣು ಸಂಸಾರದ ಬೆನ್ನೆಲುಬಾಗಿದ್ದಾರೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ ಹೆಣ್ಣು ತನ್ನನ್ನು ತಾನು ಸಬಲರನ್ನಾಗಿಸಿಕೊಳ್ಳಬೇಕು. ಸಮಾಜದಲ್ಲಿ ಹೆಣ್ಣಿಗೆ ಸಮಾನತೆ ಬಯಸುವುದು ನಮ್ಮ ಹಕ್ಕು. ನಮ್ಮ ಹಕ್ಕಿಗಾಗಿ ನಾವು ಹೋರಾಡಬೇಕಿದೆ. ಪ್ರತಿಯೊಬ್ಬರೂ ಹೆಣ್ಣನ್ನು ಗೌರವಾದರದಿಂದ ಕಾಣಬೇಕು. ಈ ಸಂಸ್ಕೃತಿ ಮನೆಯಿಂದಲೇ, ತಾಯಿ-ತಂದೆಯಿಂದಲೇ ಬರಬೇಕಿದೆ. ಇತ್ತೀಚೆಗೆ ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಹೆಣ್ಣಿಲ್ಲದ ಜೀವನ ಊಹಿಸಿಕೊಳ್ಳಲೂ ಆಗದು, ಆದ್ದರಿಂದ ಹೆಣ್ಣನ್ನು ಪ್ರೀತಿಸಿ ಮತ್ತು ಗೌರವಿಸಿ, ಆದರಿಸಿ ಎಂದು ಕರೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ವಿವಿನ ಕುಲಪತಿ ಡಾ.ಎಂ.ಕೆ. ನಾಯಕ್ ಮಾತನಾಡಿ, ವೈಜ್ಞಾನಿಕವಾಗಿ ಮುಂದುವರೆದದ್ದು ಕೆಲವು ಕ್ಷೇತ್ರಗಳಲ್ಲಿ ಅದು ಮಾರಕವಾಗಿ ಪರಿಣಮಿಸಿದೆ. ಭ್ರೂಣವನ್ನು ಹೆಣ್ಣೆಂದು ಪತ್ತೆಹಚ್ಚಿ, ಚಿಗುರುವಾಗಲೇ ಅದನ್ನು ಚಿವುಟುವಂತ ಘೋರ ಕೃತ್ಯ ವಿದ್ಯಾವಂತರಿರುವ, ಮುಂದುವರೆದ ಪಟ್ಟಣಗಳಲ್ಲಿಯೇ ಹೆಚ್ಚು ಕಂಡುಬರುತ್ತಿರುವುದು ವಿಷಾದನೀಯವೆನಿಸುತ್ತಿದೆ. ಹೆಣ್ಣಿಲ್ಲದ ಸಮಾಜವನ್ನು ಊಹಿಸಲೂ ಸಾಧ್ಯವಿಲ್ಲ. ದೇವರು ಎಲ್ಲಾ ಕಡೆ ಇರನು, ಆದ್ದರಿಂದ ತಾಯಿಯನ್ನು ಸೃಷ್ಠಿಸಿದ್ದಾನೆ. ಆಕೆ ಕುಟುಂಬದ ಬೆನ್ನೆಲುಬು. ಪ್ರತಿಯೊಂದು ಕ್ಷೇತ್ರದಲ್ಲಿ ಪುರುಷರಂತೆ ಸಮಾನಳು. ಹೆಣ್ಣನ್ನು ಪೂಜಿಸಿ, ಪ್ರೀತಿಸಿ, ಗೌರವಾದರಗಳಿಂದ ಕಾಣಬೇಕಿದೆ. ಆಗ ಮಾತ್ರ ಸಮಾನ ಜಗತ್ತು ಸಶಕ್ತ ಜಗತ್ತು ಆಗಲು ಸಾಧ್ಯವಿದೆ ಎಂದರು.

ಪ್ರಾಧ್ಯಾಪಕರು ಮತ್ತು ನೋಡಲ್ ಅಧಿಕಾರಿ (ಜೆಂಡರ್ ಬಜೆಟ್) ಡಾ. ಜಯಲಕ್ಷ್ಮೀ ನಾರಾಯಣ ಹೆಗಡೆ ಮಾತನಾಡಿ, ಇವರು ಪ್ರತಿವರ್ಷ ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ದಿನದ ಆಚರಣೆ ಪ್ರಾಮುಖ್ಯತೆ ಕುರಿತು ಮಾತನಾಡುತ್ತಾ, ಹಿಂದೆ ಮಹಿಳೆ ಮತ್ತು ಪುರುಷರಿಂದ ವೇತನ ತಾರತಮ್ಯ ಮಾಡಿದ್ದರ ಪ್ರತಿಫಲ ಮಹಿಳೆಯರು ಒಟ್ಟುಗೂಡಿ ಸಮಾನತೆ ಬೇಕೆಂದು ಧರಣಿ ಮಾಡಿದ ದಿನವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಪ್ರತಿ ವರ್ಷವೂ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ, ಅವರಿಂದ ವಿಷಯ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿ ಸ್ವಾಗತ ಕೋರಿದರು.

ಈ ಸಮಾರಂಭದಲ್ಲಿ ಡಾ. ಬಿ. ಹೇಮ್ಲಾ ನಾಯಕ್, ಡೀನ್ (ಕೃಷಿ), ಡಾ. ಟಿ.ಎಸ್. ವಾಗೀಶ್, ಡೀನ್ (ಸ್ನಾತಕೋತ್ತರ), ಡಾ. ಎಚ್. ರವೀಂದ್ರ, ಆಡಳಿತಾಧಿಕಾರಿಗಳು, ಡಾ. ಕೆ. ಸಿ. ಶಶಿಧರ, ವಿಸ್ತರಣಾ ನಿರ್ದೇಶಕರು, ಕೆ. ಗಣೇಶಪ್ಪ, ಹಣಕಾಸು ನಿಯಂತ್ರಣಾಧಿಕಾರಿಗಳು, ಡಾ ಟಿ. ಹೆಚ್. ಗೌಡ, ಉಪ ಕುಲಸಚಿವರು, ಪಿಪಿವಿಎಫ್‌ಆರ್‌ಎ ಉಪಸ್ಥಿತರಿದ್ದರು. ವಿಶ್ವ ವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಕಾರ್ಮಿಕ ವರ್ಗದವರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Get in Touch With Us info@kalpa.news Whatsapp: 9481252093

Tags: Female feticideInternational Women's DayKannada News WebsiteLatestNewsKannadaMalnadNewsShivamoggaಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಶಿವಮೊಗ್ಗಹೆಣ್ಣು ಭ್ರೂಣ ಹತ್ಯೆ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

Next Post

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

kalpa News

kalpa News

Next Post

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL