ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೋಲಾರ: ವಿವಾದಿತ ಜಮೀನಿನ ಸರ್ವೆ ಕಾರ್ಯಕ್ಕೆ ಹೋಗಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಬಿ.ಕೆ. ಚಂದ್ರಮೌಳೇಶ್ವರ (53) ಕೊಲೆಯಾದ ತಹಶೀಲ್ದಾರ್. ದೊಡ್ಡಕಳವಂಚಿ ಗ್ರಾಮ ನಿವಾಸಿ ವೆಂಕಟಪತಿ ಎಂಬಾತ ಈ ಕೃತ್ಯ ಎಸಗಿದ್ದಾನೆ. ನಿವೃತ್ತ ಶಿಕ್ಷಕನಾಗಿರುವಆರೋಪಿ ವೆಂಕಟಾಚಲಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಹಶೀಲ್ದಾರ್ ಚಂದ್ರಮೌಳೇಶ್ವರ ಬಂಗಾರಪೇಟೆ ತಾಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳವಂಚಿ ಗ್ರಾಮದ ರಾಮಮೂರ್ತಿ ಮತ್ತು ವೆಂಕಟಾಚಲಪತಿ ಎಂಬುವರ ನಡುವೆ ಸರ್ವೆ ನಂಬರ್ 5/4ರ ಜಮೀನಿನ ವಿಚಾರವಾಗಿ ವಿವಾದವಿತ್ತು. ಈ ಸಂಬಂಧ ರಾಮಮೂರ್ತಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ ಜಮೀನಿನ ಸರ್ವೆ ಮಾಡುವಂತೆ ಕೋರಿದ್ದರು.
ಹೀಗಾಗಿ ತಹಶೀಲ್ದಾರ್ ಚಂದ್ರಮೌಳೇಶ್ವರ ಸಿಬ್ಬಂದಿಯೊಂದಿಗೆ ಸರ್ವೆ ಮಾಡಲು ಕಳವಂಚಿ ಗ್ರಾಮದ ವಿವಾದಿತ ಜಮೀನಿಗೆ ಹೋಗಿದ್ದರು. ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ವೆಂಕಟಾಚಲಪತಿ ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾನೆ. ಅಲ್ಲದೇ, ಅರ್ಜಿದಾರರು ಮತ್ತು ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ವಿರೋಧದ ನಡುವೆಯೂ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸಿದರು.

ಕಾಯಕವೇ ಕೈಲಾಸ
ತೀವ್ರ ರಕ್ತಸ್ರಾವವಾಗಿ ಕುಸಿದು ಬಿದ್ದ ತಹಶೀಲ್ದಾರ್‌ನನ್ನು ಆಂಬುಲೆನ್ಸ್‌ನಲ್ಲಿ ಜಾಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದರು. ಈ ಬಗ್ಗೆ ಕಾಮಸಮುದ್ರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post