ಕೊಚ್ಚಿ: ದೇವರ ನಾಡು ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೊಚ್ಚಿ ವಿಮಾನ ನಿಲ್ದಾಣವನ್ನು ಸ್ಥಗಿತಗೊಳಿಸಲಾಗಿದೆ.
ಭಾರತೀಯ ಪವನಶಾಸ್ತ್ರ ಇಲಾಖೆಯ ವರದಿಯಂತೆ, ಕೇರಳದ ಬಹುತೇಕ ಭಾಗದಲ್ಲಿ ಮುಂದಿನ ಮೂರು ದಿನ ಕುಂಭದ್ರೋಣ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
Kerala: Kochi airport shut till August 18, 2 pm due to heavy rains. #Keralarains pic.twitter.com/NXNr9iem3u
— ANI (@ANI) August 15, 2018
ಪ್ರಮುಖವಾಗಿ, ವಯನಾಡ್, ಕೋಜಿಕೋಡ್, ಕಣ್ಣೂರು, ಕಾಸರಗೋಡು, ಮಲ್ಲಾಪುರಂ, ಪಾಲಕ್ಕಾಡ್, ಇಡುಕ್ಕಿ ಹಾಗೂ ಎರ್ನಾಕುಲಂ ಜಿಲ್ಲೆಗಳಲ್ಲಿ ನಾಳೆಯವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಬೀಳಲಿದೆ ಎಂದು ವರದಿಯಾಗಿದೆ.
Kerala: Severe water logging in parts of Trivandrum city following rainfall in the region. pic.twitter.com/mzQxUVyJ3x
— ANI (@ANI) August 15, 2018
ಈ ಹಿನ್ನೆಲೆಯಲ್ಲಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುಂಜಾನೆ 4ರಿಂದ 7 ಗಂಟೆಯವರೆಗೂ ಯಾವುದೇ ವಿಮಾನ ಇಳಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಈ ಮುನ್ನ ಹೇಳಲಾಗಿತ್ತು. ಆದರೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶನಿವಾರದವರೆಗೂ ವಿಮಾನ ನಿಲ್ದಾಣವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಇನ್ನು, ಕೇರಳದಲ್ಲಿ ಈ ಬಾರಿಯ ಮಳೆಗೆ ಇದುವರೆಗೂ 44 ಮಂದಿ ಬಲಿಯಾಗಿದ್ದಾರೆ.
Discussion about this post