ಕಲ್ಪ ಮೀಡಿಯಾ ಹೌಸ್ | ಕೊಡಗು |
ಆರು ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ #Murder ಮಾಡಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಬೇಗೂರಿನ ಕುಳತೋಡು ಗ್ರಾಮದಲ್ಲಿ ನಡೆದಿದೆ.
Also Read>> ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ | 7.3ರಷ್ಟು ತೀವ್ರತೆ ಪ್ರಮಾಣ | ಹಲವರು ನಾಪತ್ತೆ
ಹತ್ಯೆಗೀಡಾದವರನ್ನು ಗಿರೀಶ್ ತನ್ನ ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಕೇರಳ ಮೂಲದ ಗಿರೀಶ್(35) ಎಂದು ಗುರುತಿಸಲಾಗಿದೆ.
ಏಳು ವರ್ಷಗಳ ಹಿಂದೆ ಗಿರೀಶ್ ಹಾಗೂ ನಾಗಿ ವಿವಾಹವಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಸರಣಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದರೂ, ನಿಖರ ಕಾರಣ ತಿಳಿದುಬಂದಿಲ್ಲ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜರಾಮನ್ ಹಾಗೂ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post