ಬೆಂಗಳೂರು: ಇತಿಹಾಸ ಕಂಡು ಕೇಳರಿಯದ ರೀತಿಯಲ್ಲಿ ಪ್ರವಾಹಕ್ಕೆ ಸಿಲುಕಿ, ಎಲ್ಲವನ್ನೂ ಕಳೆದುಕೊಂಡಿರುವ ಕೊಡಗಿನ ಮಂದಿಗೆ ಸಹಾಯವಾಗಲಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 10 ಲಕ್ಷ ರೂ.ಗಳನ್ನು ನೀಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ಚೆಕ್ ಅನ್ನು ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶಿವರಾಜ್ ಕುಮಾರ್ ಹಸ್ತಾಂತರ ಮಾಡಿದರು.
ನಟ ಶಿವರಾಜಕುಮಾರ್ 10 ಲಕ್ಷ ರೂ ಹಾಗೂ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ರೂ 25 ಲಕ್ಷ ರೂಗಳನ್ನು ಮಡಿಕೇರಿ ಅತಿವೃಷ್ಟಿ ಸಂತ್ರಸ್ತರಿಗೆ ಪರಿಹಾರವಾಗಿ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು . #drshivrajkumar#KodaguFloods #KarnatakaRains pic.twitter.com/7f6zdqI7x4
— CM of Karnataka (@CMofKarnataka) August 20, 2018
ಇದೇವೇಳೆ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ.ಗಳನ್ನು ನೀಡಿದ್ದಾರೆ.
















