ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಗ್ರಾಮದಲ್ಲಿ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ #Murder ಮಾಡಿದ್ದ ಆರೋಪಿಯನ್ನು ಕೇರಳದ #Kerala ತಲಪುಳ ಎಂಬಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also Read>> ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಬಸವರಾಜ ಬೊಮ್ಮಾಯಿ
ಆರೋಪಿಯನ್ನು ಗಿರೀಶ್(38) ಎಂದು ಗುರುತಿಸಲಾಗಿದ್ದು, ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸಿದ್ದಾರೆ.
ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ಒಂಟಿ ಗುಡಿಸಲಿನಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ(30) ಹಾಗೂ ನಾಗಿಯ ಪುತ್ರಿ ಕಾವೇರಿ(7)ಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಗಿರೀಶ್ ತಲೆಮರೆಸಿಕೊಂಡಿರುವ ಆರೋಪದಡಿ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಆರೋಪಿ ಗಿರೀಶ್ ನಾಗಿಯ 3ನೇ ಪತಿಯಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸಿಸುತ್ತಿದ್ದರು. 2ನೇ ಗಂಡನಾದ ಸುಬ್ರಮಣಿಯೊಂದಿಗೆ ನಾಗಿ ಮತ್ತೆ ಸಂಬಂಧ ಹೊಂದಿರುವ ಬಗ್ಗೆ ಸಂಶಯಗೊಂಡು ಮಾ.27ರಂದು ರಾತ್ರಿ ಗಿರೀಶ್ ನಾಲ್ವರನ್ನು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post