ಕಲ್ಪ ಮೀಡಿಯಾ ಹೌಸ್ | ಕೊಡಗು |
ಸ್ಕೂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಭಾವನಾ(21) ಎಂದು ಗುರುತಿಸಲಾಗಿದ್ದು, ಈಕೆ ಕುಶಾಲನಗರದ ನಿವಾಸಿ ಎಂದು ವರದಿಯಾಗಿದೆ.
ಕೂರ್ಗ್ ಸಿನೆಪ್ಲೆಕ್ಸ್ ಬಳಿ ಸ್ಕೂಟರ್’ನಲ್ಲಿ ವಿದ್ಯಾರ್ಥಿನಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡ ಆಕೆಯನ್ನು ತತಕ್ಷಣವೇ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆ ವೇಳೆಗಾಗಲೇ ಆಕೆ ಕೊನೆಯುಸಿರೆಳೆದಿದ್ದರು ಎಂದು ವರದಿಯಾಗಿದೆ.
Also read: ರಾಜ್ಯ ಸರ್ಕಾರದ ಮತ್ತೊಂದು ಶಾಕ್! ಇಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಏರಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post