ಕಲ್ಪ ಮೀಡಿಯಾ ಹೌಸ್
ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬೇಟಿ ನೀಡಿ ಪರಿಶೀಲಿಸಿದರು.
ನಂತರ ಕೊಡಗು-ಕೇರಳ ಗಡಿ ಭಾಗದ ತೊಳ್ಪಟ್ಟಿಗೆ ಭೇಟಿ ನೀಡಿ, ಚೆಕ್ ಪೋಸ್ಟ್ನಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಸಕಬೋಪಯ್ಯ, ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣ್ಯ, ಅಪರ ಜಿಲ್ಲಾಧಿಕಾರಿ, ಡಿಹೆಚ್ಓ, ತಾಲೂಕು ವೈದ್ಯಾಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post