ಕಲ್ಪ ಮೀಡಿಯಾ ಹೌಸ್ | ಕೋಲಾರ |
ತನ್ನ ಪತ್ನಿಯನ್ನೇ ಕೊಂದು, ಮಾವನ ಮಾವನ ಮೇಲೆ ವ್ಯಕ್ತಿಯೊಬ್ಬರ ಮಾರಣಾಂತಿಕ ಹಲ್ಲೆ ನಡೆಸಿರುವ ಭೀಕರ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನಂಬಿಹಳ್ಳಿಯಲ್ಲಿ ಘಟನೆ ನಡೆದಿದ್ದು, ಈತನನ್ನು ಸಿನಿಮಿಯಾ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

Also read: ಹಣದ ಬೆನ್ನೇರದೆ ಬದುಕಿಗಾಗಿ ಕಲಿಯಲು ಪ್ರಯತ್ನಿಸಿ: ಜಿ.ಎಸ್. ನಾರಾಯಣರಾವ್ ಕರೆ
ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಗೇಶನ ವಿಚ್ಛೇದಿತ ಪತ್ನಿ ರಾಧಾ ಮತ್ತು ಮಾವನ ತಲೆಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ದಾಳಿಗೊಳಗಾದ ರಾಧಾ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಮಾವ ತೀವ್ರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಅವರು ಆರೋಪಿಗೆ ಶರಣಾಗಲು ಸೂಚಿಸಿದ್ದಾರೆ. ಆದರೆ, ನಾಗೇಶ್ ಪೊಲೀಸರ ಮೇಲೆಯೇ ಮಾರಕಾಸ್ತçಗಳಿಂದ ದಾಳಿಗೆ ಮುಂದಾದ ವೇಳೆ ನಾರಾಯಣ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದುಬಿದ್ದ ನಾಗೇಶನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.











Discussion about this post