ಕಲ್ಪ ಮೀಡಿಯಾ ಹೌಸ್ | ಕೋಲಾರ |
ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಾ, ಯುವ ಪೀಳಿಗೆಯ ದಾರಿ ತಪ್ಪಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದ್ದು, ಈತನನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Also read: ಈ ಪ್ರತಿಷ್ಠಿತ ಪ್ರಶಸ್ತಿ ಬಾಚಿಕೊಂಡ ಕನ್ನಡದ ಮೊದಲ ಸಿನಿಮಾ ಎಂಬ ಹಿರಿಮೆ ಕಾಂತಾರ ಮುಡಿಗೆ
ಕಾಳಹಸ್ತಿಪುರದ ಗೋಲ್ಡನ್ ಸಿಟಿ ಲೇಔಟ್’ನಲ್ಲಿ ಆರೋಪಿ ಮನೆ ಮಾಡಿಕೊಂಡಿದ್ದ. ಬಂಧಿತನಿAದ ಸುಮಾರು 70 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.










Discussion about this post