ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೋಲಾರ: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಸೀದಿಯೊಳಗೆ ನುಗ್ಗಿ ತಹಶೀಲ್ದಾರ್ ಶೋಭಿತಾ ಅವರು ಅವಾಜ್ ಹಾಕಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ತತಕ್ಷಣವೇ ಧೈರ್ಯದಿಂದ ಮಸೀದಿಯೊಳಕ್ಕೆ ನುಗ್ಗಿ, ಯಾರು ನಿಮಗೆ ಅನುಮತಿ ಕೊಟ್ಟರು, ಗೊತ್ತಿಲ್ವಾ ನಿಮಗೆ ಮಸೀದಿಗಳನ್ನು ಮುಚ್ಚಬೇಕು ಎಂದು? ನಿಮ್ಮ ಖಾಜಿಯನ್ನು ಕರೆಯಿರಿ ಎಂದು ಸಖತ್ ಅವಾಜ್ ಹಾಕಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕೋಲಾರ ಗ್ರೀನ್ ಝೋನ್ ಅಲ್ಲಿ ಇರುವ ಕಾರಣ ನಮ್ಮ ಜನರಿಗೆ ಸ್ವಲ್ಪ ಗಂಭೀರತೆ ಕಡಿಮೆಯಾಗಿದೆ. ಹೀಗಾಗಿ ಆ ಮಸೀದಿ ನಗರದ ಮಧ್ಯಭಾಗದಲ್ಲಿ ಇದ್ದು ಅದರ ಸುತ್ತಮುತ್ತ ಬಟ್ಟೆ ಅಂಗಡಿಯಂತಹ ಕೆಲ ಶಾಪ್‌ಗಳು ಇವೆ. ಇಲ್ಲಿನ ಕೆಲ ಯುವಕರು ರಜೆ ಇರುವ ಕಾರಣ ನಮಾಜ್ ಸಮಯದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್ ಮಾಡಿದ ಹಿನ್ನೆಲೆಯಲ್ಲಿ ಹಲವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post