ಕಲ್ಪ ಮೀಡಿಯಾ ಹೌಸ್ | ಕೋಲಾರ |
ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿರೂಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ಬಸ್‌ನಲ್ಲಿ ೧೫ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಬುಧವಾರ ಮುಂಜಾನೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗಿದೆ.
ಗುಂಟೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
Also read: ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಡಿಯೂರಪ್ಪ ನೇಮಕ: ಸಿಎಂ ಅಭಿನಂದನೆ
ಖಾಸಗಿ ಬಸ್ ವಿಜಯವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ನಸುಕಿನ ಜಾವ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಮುಳಬಾಗಿಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, , ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post