ಕಲ್ಪ ಮೀಡಿಯಾ ಹೌಸ್ | ಕೋಲಾರ |
ಜಗತ್ತು AI (Artificial Intelligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ #K V Prabhakar ಅವರು ಅಭಿಪ್ರಾಯಪಟ್ಟರು.
ಮಾಧ್ಯಮ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮತ್ತೊಂದು ಊಹಾ ಪತ್ರಿಕೋದ್ಯಮ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.
ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು
ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…
- AI (ಕೃತಕ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ ತಂದೊಡ್ಡುವ ಸವಾಲು.
- ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.
ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು. ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.

- ಜಾಹಿರಾತು ಆದಾಯ 4% ಹೆಚ್ಚಾಗಿದೆ
- ಪತ್ರಿಕೆಗಳ ಪ್ರಸಾರದಿಂದ ಬರುವ ಆದಾಯ 3% ಹೆಚ್ಚಾಗಿದೆ.
- ದಿನಪತ್ರಿಕೆಗಳಲ್ಲದ ಮ್ಯಾಗ್ಸೀನ್ ಗಳ ಆದಾಯ 3% ಹೆಚ್ಚಾಗಿದೆ.
- ಜಾಹಿರಾತು insertion ಗಳ ಪ್ರಮಾಣ 4% ಹೆಚ್ಚಾಗಿದೆ. ( ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರಗಳನ್ನು ಹಾಕಿ ಕಳುಹಿಸುವುದು).
- ಇಂಗ್ಲಿಷ್ ಪತ್ರಿಕೆಗಳ circulation ಆದಾಯ 10% ಹೆಚ್ಚಾಗಿದ್ದರೆ, ಕನ್ನಡ ಮತ್ತು ಇತರೆ ರಾಜ್ಯ ಭಾಷಿಕ ಪತ್ರಿಕೆಗಳ circulation ಆದಾಯ 2% ಹೆಚ್ಚಾಗಿದೆ.
- ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.
- ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post