ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ತನ್ನ ಮನೆಯ ಸಾಕು ನಾಯಿಯ ಮೇಲೆ 60 ವರ್ಷದ ವ್ಯಕ್ತಿಯೊಬ್ಬ 2 ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ರತಿಕಾಂತ್ ಸರ್ದಾರ್ ಆರೋಪಿ ಎಂದು ಗುರುತಿಸಲಾಗಿದ್ದು, ನಾಯಿ ಕೂಗುತ್ತಿದ್ದಂತೆ ಸ್ಥಳೀಯರು ಸರ್ದಾರ್ ಅನ್ನು ಅಮಲೇರಿದ ಮತ್ತು ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಗುರುತಿಸಿದ್ದಾರೆ. ಅದಾದ ಬಳಿಕ ರತಿಕಾಂತ್ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಕೃತ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.
ಸರ್ದಾರ್ ಸುಮಾರು 2 ವರ್ಷಗಳಿಂದ ತನ್ನ ಸಾಕು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ನಾಯಿಯನ್ನು ಬಿಡುಗಡೆ ಮಾಡುವಂತೆ ಮತ್ತು ಅಂತಹ ಕೃತ್ಯದಿಂದ ದೂರವಿರುವಂತೆ ಪದೇ ಪದೇ ಕೇಳಿಕೊಂಡಿದ್ದೆವು. ಆದರೆ ಆತ ಮಾತನ್ನು ಕೇಳಲು ನಿರಾಕರಿಸುತ್ತಿದ್ದ ಎಂದು ಸ್ಥಳೀಯನೊಬ್ಬರು ಹೇಳಿದರು.
Also read: ಶ್ರೀ ಶಿವಕುಮಾರ ಸ್ವಾಮೀಜಿ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟಿದ್ದು, ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರೇಮಿಗಳ ಸಂಘಟನೆಯ ಸದಸ್ಯರೊಬ್ಬರು ಸೋನಾರ್‌ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರತಿಕಾಂತ್ ಸರ್ದಾರ್‌ನನ್ನು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post