ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ(ಪಶ್ಚಿಮ ಬಂಗಾಳ) |
ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಭೀಕರ ಹತ್ಯೆ ವಿರುದ್ಧ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಶ್ಚಿಮ ಬಂಗಾಳ ವಿಧಾನಸಭೆ ತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ.
ರಾಜ್ಯ ಅತ್ಯಾಚಾರ ವಿರೋಧಿ ಮಸೂದೆಗೆ ಪ್ರತಿಪಕ್ಷಗಳು ಸಂಪೂರ್ಣ ಬೆಂಬಲ ನೀಡಿದ ನಂತರ ಪಶ್ಚಿಮ ಬಂಗಾಳ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು.

`ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳು ಮತ್ತು ತಿದ್ದುಪಡಿ) ಮಸೂದೆ 2024′ ಎಂಬ ಶೀರ್ಷಿಕೆಯ ಶಾಸನವು ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬAಧಿಸಿದ ಹೊಸ ನಿಬಂಧನೆಗಳನ್ನು ಪರಿಷ್ಕರಿಸುವ ಮತ್ತು ಪರಿಚಯಿಸುವ ಮೂಲಕ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಸರ್ಕಾರಿ ಸ್ವಾಮ್ಯದ ಆರ್’ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ-ಕೊಲೆಗೆ ಪ್ರತಿಕ್ರಿಯೆಯಾಗಿ ಕರೆಯಲಾದ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ಶಾಸನವನ್ನು ಮಂಡಿಸಿದರು. ಈ ಭಯಾನಕ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲು ಬಲವಾದ ಕಾನೂನು ಕ್ರಮಗಳ ಬೇಡಿಕೆಯನ್ನು ತೀವ್ರಗೊಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post